BIG NEWS: ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಮೂಲಕ ಕಾಂಗ್ರೆಸ್ ಗೆ ಮತ ಹಾಕಿದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿ ಶಾಸಕರಾಗಿ, ಕಾಂಗ್ರೆಸ್ ಗೆ ಮತಚಲಾವಾಣೆ ಮಾಡಿದ್ದು, ಪಕ್ಷಕ್ಕೆ ಮಾಡಿರುವ ದ್ರೋಹ ಎಂದು ಕಾರ್ಯಕರ್ತರು ಕಿಡಿಕಾರಿದ್ದಾರೆ. ಯಶವಂತಪುರ, ಕೆಂಗೇರಿ ಉಪನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.

ರಸ್ತೆಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ, ಸೋಮಶೇಖರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಶವಂತಪುರ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಅವರನ್ನು ಗೆಲ್ಲಿಸಲಾಗಿತ್ತು. ಅಲ್ಲದೇ ಬಿಜೆಪಿಯಲ್ಲಿ ಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿಯೂ ಮಾಡಲಾಗಿತ್ತು. ಈಗ ಶಾಸಕರಾಗಿ ಆಯ್ಕೆಯಾಗಿದ್ದರೂ ಅಧಿಕಾರದ ಹಪಾಹಪಿಗಾಗಿ ಅಡ್ಡಮತದಾನ ಮಾಡುವ ಮೂಲಕ ಪಕ್ಷಕ್ಕೆ ಮೋಸ ಮಾಡಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read