HomeKarnatakaBIG NEWS: ಪಕ್ಷಕ್ಕೆ ಕರ್ಕೊಂಡು ಬರುವಾಗ ಜಾಮೂನು ಕೊಡ್ತಾರೆ; ಅಧಿಕಾರ ಮುಗಿದ ಮೇಲೆ ವಿಷ ಕೊಡ್ತಾರೆ;...

BIG NEWS: ಪಕ್ಷಕ್ಕೆ ಕರ್ಕೊಂಡು ಬರುವಾಗ ಜಾಮೂನು ಕೊಡ್ತಾರೆ; ಅಧಿಕಾರ ಮುಗಿದ ಮೇಲೆ ವಿಷ ಕೊಡ್ತಾರೆ; ಬಿಜೆಪಿ ವಿರುದ್ಧವೇ ಕೆಂಡಕಾರಿದ ಮಾಜಿ ಸಚಿವ ಎಸ್.ಟಿ. ಸೋಮಶೇಖರ್

ಮೈಸೂರು: ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಸ್ವಪಕ್ಷದ ವಿರುದ್ಧವೇ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ನನ್ನನ್ನು ಪಕ್ಷದಿಂದ ಬಿಡಿಸಲು ಬಿಜೆಪಿಯವರೇ ಮುಂದಾಗುತ್ತಿದ್ದಾರೆ. ಸೋಮಶೇಖರ್ ಹೋದರೆ ಹೋಗಲಿ ಎಂದು ಮಾತನಾಡುತ್ತಿದ್ದಾರೆ ಎಂದು ಗುಡುಗಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಸ್.ಟಿ.ಸೋಮಶೇಖರ್, ಪಕ್ಷಕ್ಕೆ ಬರುವಾಗ ಬಿಜೆಪಿಯವರು ಜಾಮೂನು ಕೊಡ್ತಾರೆ. ಅಧಿಕಾರ ಮುಗಿದ ಮೇಲೆ ವಿಷ ಕೊಡ್ತಾರೆ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ಕಾಂಗ್ರೆಸ್ ನಲ್ಲಿದ್ದವನು. ಅವರಾಗಿಯೇ ಪಕ್ಷಕ್ಕೆ ಸೇರಿಸಿಕೊಂಡರು. ಈಗ ಸೋಮಶೇಖರ್ ಹೋದರೆ ಹೋಗಲಿ ಎಂದು ಮತನಾಡುತ್ತಿದ್ದಾರೆ. ನನ್ನನ್ನು ಪಕ್ಷದಿಂದ ಬಿಡಿಸಲು ರೆಡಿಯಾಗಿದ್ದಾರೆ. ನನ್ನ ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಸಿಎಂ, ಡಿಸಿಎಂ ಭೇಟಿಯಾಗುತ್ತೇನೆ ತಪ್ಪೇನು? ಎಂದು ಕೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular