HomeKarnatakaBIG NEWS: ಡಿ.ಕೆ.ಶಿವಕುಮಾರ್ ಹಾಡಿ ಹೊಗಳಿದ ಬಿಜೆಪಿ ಶಾಸಕ; ಕುತೂಹಲ ಮೂಡಿಸಿದ ಎಸ್.ಟಿ.ಸೋಮಶೇಖರ್ ಹೇಳಿಕೆ

BIG NEWS: ಡಿ.ಕೆ.ಶಿವಕುಮಾರ್ ಹಾಡಿ ಹೊಗಳಿದ ಬಿಜೆಪಿ ಶಾಸಕ; ಕುತೂಹಲ ಮೂಡಿಸಿದ ಎಸ್.ಟಿ.ಸೋಮಶೇಖರ್ ಹೇಳಿಕೆ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಹಾಡಿ ಹೊಗಳಿರುವ ಪ್ರಸಂಗ ನಡೆದಿದೆ.

ಕೆಂಪೇಗೌಡ ಬಡಾವಣೆ ವೀಕ್ಷಣೆ ವೇಳೆ ಮಾತನಾಡಿದ ಎಸ್.ಟಿ.ಸೋಮಶೇಖರ್, ನಾನು ಈ ಹಂತಕ್ಕೆ ಬೆಳೆಯಲು ಡಿ.ಕೆ.ಶಿವಕುಮಾರ್ ಕಾರಣ. ಸಹಕಾರ ಕ್ಷೇತ್ರದಲ್ಲಿ ಬೆಳೆಯಲು ನನ್ನ ಗುರು ಡಿ.ಕೆ.ಶಿವಕುಮಾರ್ ಎಂದು ಶ್ಲಾಘಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರಹಳ್ಳಿ ಕ್ಷೇತ್ರದ ಶಾಸಕ ಆಗಬೇಕು ಎಂದು ನನ್ನ ಹೆಸರು ಘೋಷಿಸಿದ್ದರು. ಆಗ ನನ್ನನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದು ಡಿ.ಕೆ.ಶಿವಕುಮಾರ್. ಡಿ.ಕೆ.ಶಿವಕುಮಾರ್ ಶ್ರಮದಿಂದ ನಾನು ಇಂತಹ ವೇದಿಕೆಯಲ್ಲಿ ಮಾತನಾಡುತ್ತಿದ್ದೇನೆ. ಡಿ.ಕೆ.ಶಿವಕುಮಾರ್ ಮೇಲೆ ಬೆಂಗಳೂರಿನ ಜನ ವಿಶ್ವಾಸವಿಟ್ಟಿದ್ದಾರೆ. ಅದರಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲಸ ಮಾಡುತ್ತಿದ್ದಾರೆ ಎಂದು ಹೊಗಳಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಬಗ್ಗೆ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಮೆಚ್ಚುಗೆ ಮಾತುಗಳನ್ನಾಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular