HomeKarnatakaರಾಜ್ಯದ 5, 8 ಮತ್ತು 9 ನೇ ತರಗತಿಗೆ ʻ SA-2ʼ ಪರೀಕ್ಷೆ : ʻಮಾದರಿ...

ರಾಜ್ಯದ 5, 8 ಮತ್ತು 9 ನೇ ತರಗತಿಗೆ ʻ SA-2ʼ ಪರೀಕ್ಷೆ : ʻಮಾದರಿ ಪ್ರಶ್ನೋತರ ಪತ್ರಿಕೆʼ ಪ್ರಕಟ

ಬೆಂಗಳೂರು :  2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ಸಂಕಲನಾತ್ಮಕ ಮೌಲ್ಯಾಂಕನ-2 (SA-2) ಕ್ಕೆ ಸಂಬಂಧಿಸಿದಂತೆ ಮಾದರಿ ಪ್ರಶೋತ್ತರ ಪತ್ರಿಕೆಗಳನ್ನು ಮಂಡಲಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಾಂಕನ-2 (SA-2) ಕಾರ್ಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿದೆ.

ಸದರಿ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ 5, 8 ಮತ್ತು 9ನೇ ತರಗತಿಯ ಮಾದರಿ ಪ್ರಶೋತ್ತರ #gf 량: 26.01.2024 ಮಂಡಳಿಯ ವೆಬ್‌ ಸೈಟ್‌ https://kseab.karnataka.gov.in ಪ್ರಕಟಿಸಲಾಗಿದೆ. ಸದರಿ ಮಾದರಿ ಪ್ರಶೋತ್ತರ ಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಅಭ್ಯಸಿಸುವಂತೆ ಕ್ರಮವಹಿಸಲು ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular