HomeLatest Newsಮಿದುಳು ತಿನ್ನುವ ಅಮೀಬಾ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಶಬರಿಮಲೆ ಯಾತ್ರಿಕರಿಗೆ ಮಾರ್ಗಸೂಚಿ

ಮಿದುಳು ತಿನ್ನುವ ಅಮೀಬಾ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಶಬರಿಮಲೆ ಯಾತ್ರಿಕರಿಗೆ ಮಾರ್ಗಸೂಚಿ

ಬೆಂಗಳೂರು; ಮಿದುಳು ತಿನ್ನುವ ಅಮೀಬಾ(ನೇಗೇರಿಯಾ ಫೌಲೇರಿ) ಕುರಿತು ಮುನ್ನೆಚ್ಚರಿಕೆವಹಿಸಲು ಶಬರಿಮಲೆ ಯಾತ್ರಿಕರಿಗೆ ಸುರಕ್ಷತಾ ಸಲಹಾ ಮಾರ್ಗಸೂಚಿ ನೀಡಲಾಗಿದೆ.

ಕೇರಳ ರಾಜ್ಯದಲ್ಲಿ ನೇಗೇರಿಯಾ ಫೌಲೇರಿ(Naegleria fowleri) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ನೆಫಲೈಟಿಸ್ (Amoebic meningoencephalitis) ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಶಬರಿಮಲೆ ಯಾತ್ರಿಕರಿಗೆ ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ/ ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಸಲಹೆಗಳನ್ನು ಕೆಳಕಂಡಂತೆ ನೀಡಲಾಗಿದೆ.

1. ನೇಗೇರಿಯಾ ಫೌಲೇರಿ (Naegleria fowler) ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉದಾಹರಣೆಗೆ ನಿಂತ ನೀರು, ಕೊಳ/ಈಜು ಕೊಳಗಳು ಹಾಗೂ ಕೆರೆ.

2. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ.

3. ನಗೋರಿಯಾ ಪೌಲರಿ (Naegleria fowleri) ಅತ್ಯಂತ ವಿಷಕಾರಿ (virulent) ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್‌ (Amoebic meningoencephalitis) ಎನ್ನುವ ಅಪರೂಪದ ಗಂಭೀರ/ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ. ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್‌ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸಿ.

4. ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ ತೀವು ತಲೆನೋವು, ವಾಕರಿಕೆ/ ವಾಂತಿ, ಕುತ್ತಿಗೆ ಬಿಗಿತ, ಗೊಂದಲ/ ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ (behavioural disorders) ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆ/ ವೈದ್ಯರನ್ನು ಸಂಪರ್ಕಿಸಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular