HomeIndiaಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: 350 ವಿಶೇಷ ರೈಲು, ಬಸ್ ವ್ಯವಸ್ಥೆ

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: 350 ವಿಶೇಷ ರೈಲು, ಬಸ್ ವ್ಯವಸ್ಥೆ

ಕಾಸರಗೋಡು: ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲವಾಗುವಂತೆ 350 ವಿಶೇಷ ರೈಲು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಶಬರಿಮಲೆ ಮಂಡಲ ಮಹೋತ್ಸವ, ಮಕರ ಮಹೋತ್ಸವಕ್ಕಾಗಿ ಸಿದ್ಧತೆಗಳು ಆರಂಭವಾಗಿದ್ದು, ಸಾರಿಗೆ ವ್ಯವಸ್ಥೆ ಸುಗಮಗೊಳಿಸಲು ಭಾರತೀಯ ರೈಲ್ವೆಯಿಂದ 350 ವಿಶೇಷ ರೈಲು ಸೇವೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಭಕ್ತರನ್ನು ಪಂಪಾ ಹಾಗೂ ನಿಲಕ್ಕಲ್ ಗೆ ತಲುಪಿಸಲು ವಿಶೇಷ ಬಸ್ ಸೌಲಭ್ಯ ಕಲ್ಪಿಸಲು ಕೇರಳ ಸಾರಿಗೆ ಸಂಸ್ಥೆ ಸಜ್ಜಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಡಲ ಹಾಗೂ ಮಕರ ಮಹೋತ್ಸವದ ಅಂತ್ಯದ ವರೆಗೆ ಕೇರಳ ಸಾರಿಗೆ ಸಂಸ್ಥೆ ಸೇವೆ ನೀಡಲು ಪ್ರಕ್ರಿಯೆ ಪೂರ್ಣಗೊಳಿಸಿದೆ. ಅಲ್ಲದೇ, ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಪಂಪಾಕ್ಕೆ ಸೀಟುಗಳನ್ನು ಮುಂಗಡವಾಗಿ ಕಾಯ್ದಿರಿಸುವ ಸೌಲಭ್ಯ ಕೂಡ ಕಲ್ಪಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular