HomeIndiaವಿದ್ಯಾರ್ಥಿಗಳ ಮೇಲಿನ ದಾಳಿಗೆ ಅಮಿತ್ ಶಾ ಕಾರಣ: ಗೃಹ ಸಚಿವ ಸ್ಥಾನದಿಂದ ವಜಾಗೊಳಿಸಿ: ರಾಹುಲ್ ಗಾಂಧಿ...

ವಿದ್ಯಾರ್ಥಿಗಳ ಮೇಲಿನ ದಾಳಿಗೆ ಅಮಿತ್ ಶಾ ಕಾರಣ: ಗೃಹ ಸಚಿವ ಸ್ಥಾನದಿಂದ ವಜಾಗೊಳಿಸಿ: ರಾಹುಲ್ ಗಾಂಧಿ ಒತ್ತಾಯ

ನವದೆಹಲಿ: ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲಿನ ದಾಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಕಾರಣರಾಗಿದ್ದು ಕೇಂದ್ರ ಗೃಹ ಸಚಿವ ಸ್ಥಾನದಿಂದ ಅವರನ್ನು ವಜಾಗೊಳಿಸಬೇಕು ಎಂದು ಪ್ರಧಾನಿ ಮೋದಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಫಲರಾಗಿದ್ದಾರೆ. ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕ್ರೌರ್ಯ ಎಸಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಅಮಿತ್ ಶಾ ಅವರನ್ನು ವಜಾಗೊಳಿಸಿ, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆಗೆ ಆದೇಶಿಸಿ ಎಂದು ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳ ಹೋರಾಟ ಹತ್ತಿಕ್ಕಲು ಪೆಲೆಟ್ ಗನ್ ಬಳಸಿದ್ದಾರೆ. ಲಾಠಿಗಳಿಗೆ ಮೊಳೆ ಸೇರಿಸಿ ವಿದ್ಯಾರ್ಥಿಗಳ ಮೇಲೆ ಹೊಡೆದಿದ್ದಾರೆ. ದೆಹಲಿ ಪೊಲೀಸರು ಮತ್ತು ಆರ್‌ಎಎಫ್ ಗೃಹ ಸಚಿವಾಲಯದ ವ್ಯಾಪ್ತಿಯಲ್ಲಿದೆ. ಗೃಹ ಸಚಿವರ ಆದೇಶವಿಲ್ಲದೆ ಪೊಲೀಸರು ಕಾರ್ಯ ನಿರ್ವಹಿಸುವುದಿಲ್ಲ. ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಪೊಲೀಸರು ಹೊಡೆದಿದ್ದಾರೆ. ಯುವಕರು, ಯುವತಿಯರು ಎನ್ನದೆ ಎಳೆದಾಡಿದ್ದಾರೆ. ಪೊಲೀಸರು ಲಾಠಿಗಳಿಂದ ಮಕ್ಕಳಿಗೆ ತಿವಿದಿದ್ದಾರೆ ಎಂದು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವನ್ನು ಲೋಕಸಭೆಯಲ್ಲಿ ಪ್ರಸ್ತಾಪ ಮಾಡಿದ್ದೆ. ಆದರೆ ಮೈಕ್ ಆಫ್ ಮಾಡಿದರು ಎಂದು ದೂರಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸರ್ಕಾರ ಉತ್ತರ ನೀಡಬೇಕು ಎಂದು ಒತ್ತಾಯಿಸಿದ ರಾಹುಲ್ ಗಾಂಧಿ, ಜುಲೈ 20ರಂದು ನಡೆದ ಘಟನೆಗೆ ಗೃಹ ಸಚಿವ ಅಮಿತ್ ಶಾ ಹೊಣೆಗಾರರಾಗಿದ್ದರೆ. ವಿದ್ಯಾರ್ಥಿಗಳ ಹೋರಾಟ ಹತ್ತಿಕ್ಕಲು ಪೊಲೀಸರನ್ನು ಬಳಸಿದ್ದಾರೆ. ಶಾಂತಿಯುತವಾಗಿಯೇ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ್ದರು. ಸಿವಿಲ್ ಡ್ರೆಸ್ ನಲ್ಲಿದ್ದ ಕೆಲವರು ವಿದ್ಯಾರ್ಥಿಗಳನ್ನು ಥಳಿಸಿದ್ದಾರೆ. ಅಮಿತ್ ಶಾ ಲಾಠಿಚಾರ್ಜ್ ಗೆ ಆದೇಶಿಸಿದ್ದರು. ಕೆಲವು ವಿದ್ಯಾರ್ಥಿಗಳಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ಇವೆಲ್ಲಾ ಘಟನೆಗಳ ಹಿನ್ನೆಲೆಯಲ್ಲಿ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular