ಹುಬ್ಬಳ್ಳಿ: ರಾಜ್ಯಾದ್ಯಂತ ಜೂನ್ 1ರಿಂದ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ವಿತರಿಸಲಾಗುವುದು ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಸರ್ಕಾರ ಅನುಮತಿ ನೀಡಿದೆ. ಇದಕ್ಕೆ ಪರ್ಯಾಯವಾಗಿ ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ ಶ್ರೀರಾಮ ಸೇನೆ ವತಿಯಿಂದ ಕೇಸರಿ ಶಾಲುಗಳನ್ನು ವಿತರಿಸಲಾಗುವುದು ಎಂದು ಹೇಳಿದ್ದಾರೆ.
ಹಿಜಾಬ್ ವಿಷಯ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಯ ಹಂತದಲ್ಲಿದೆ. ಹೀಗಿರುವಾಗ ಸರ್ಕಾರ ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಿದೆ. ವಿದ್ಯಾರ್ಥಿಗಳ ನಡುವೆ ವಿಷ ಬೀಜ ಬಿತ್ತಲು ಹೊರಟಿದೆ ಎಂದು ಆರೋಪಿಸಿದ ಅವರು, ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಸರ್ಕಾರ ಅನುಮತಿ ನೀಡಿದ್ದಕ್ಕೆ ಪರ್ಯಾಯವಾಗಿ ಶ್ರೀರಾಮ ಸೇನೆಯಿಂದ ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ ಜೂನ್ 1ರಿಂದ ಕೇಸರಿ ಶಾಲು ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

