BIG NEWS: ಮಾಜಿ ಶಾಸಕ ಎಲ್.ಟಿ. ತಿಮ್ಮಪ್ಪ ಹೆಗಡೆ ವಿಧಿವಶ

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಶಾಸಕ ಎಲ್.ಟಿ. ತಿಮ್ಮಪ್ಪ ಹೆಗಡೆ ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ. 94 ವರ್ಷದ ತಿಮ್ಮಪ್ಪ ಹೆಗಡೆ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದಿಂದ 1978, ಹಾಗೂ 1983 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಅವರು ಸಹಕಾರ ಕ್ಷೇತ್ರದಲ್ಲಿಯೂ ತಮ್ಮನ್ನು ಗುರುತಿಸಿಕೊಂಡಿದ್ದರು.

ದೀರ್ಘಕಾಲ ರಾಜಕಾರಣದಲ್ಲಿದ್ದರೂ ಸಹ ಅವರು ತಮ್ಮ ಸರಳ ಸಜ್ಜನಿಕೆಯ ವ್ಯಕ್ತಿತ್ವದಿಂದ ಯಾವುದೇ ವಿವಾದಕ್ಕೆ ಸಿಲುಕದೆ ಅಜಾತಶತ್ರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ತಿಮ್ಮಪ್ಪ ಹೆಗಡೆ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read