HomeLatest Newsಮೈಸೂರಿನಲ್ಲಿ ಇಂದು ಸಕಲ ಸರ್ಕಾರಿ ಗೌರವದೊಂದಿಗೆ ಸಾಹಿತಿ ಎಸ್.ಎಲ್. ಭೈರಪ್ಪ ಅಂತ್ಯಕ್ರಿಯೆ

ಮೈಸೂರಿನಲ್ಲಿ ಇಂದು ಸಕಲ ಸರ್ಕಾರಿ ಗೌರವದೊಂದಿಗೆ ಸಾಹಿತಿ ಎಸ್.ಎಲ್. ಭೈರಪ್ಪ ಅಂತ್ಯಕ್ರಿಯೆ

ಮೈಸೂರು: ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ(94) ಅಂತ್ಯಕ್ರಿಯೆ ಇಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಚಿರಶಾಂತಿಧಾಮದಲ್ಲಿ ನೆರವೇರಲಿದೆ.

ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಗುರುವಾರ ಎಸ್.ಎಲ್. ಭೈರಪ್ಪ ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ತರಲಾಗಿದ್ದು, ಮೈಸೂರಿನ ಕಲಾಮಂದಿರದ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಜೆಎಸ್ಎಸ್ ಆಸ್ಪತ್ರೆಗೆ ಪಾರ್ಥಿವ ಶರೀರ ರವಾನಿಸಲಾಗಿದೆ.

ಶುಕ್ರವಾರ ಬೆಳಗ್ಗೆ 8:30 ಕ್ಕೆ ಭೈರಪ್ಪ ಅವರ ಮನೆಯಲ್ಲಿ ಅಂತಿಮ ವಿಧಿ ವಿಧಾನ ನಡೆಸಿ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular