ಮಂಡ್ಯದ 87ನೇ ಸಾಹಿತ್ಯ ಸಮ್ಮೇಳನದಲ್ಲಿ 87 ಪುಸ್ತಕಗಳ ಲೋಕಾರ್ಪಣೆ

ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 87 ಪುಸ್ತಕಗಳನ್ನು ಬಿಡುಗಡೆ ಮಾಡುವುದಾಗಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ತಿಳಿಸಿದ್ದಾರೆ.

ಸಾಹಿತ್ಯ ಪರಿಷತ್ತಿನ ಪ್ರಮುಖ ಕಾರ್ಯ ಚಟುವಟಿಕೆಗಳಲ್ಲಿ ಪುಸ್ತಕ ಪ್ರಕಟಣೆ ಕೂಡ ಒಂದಾಗಿದ್ದು, ಇದುವರೆಗೆ 1,800ಕ್ಕೂ ಅಧಿಕ ಪುಸ್ತಕಗಳನ್ನು ಪ್ರಕಟಿಸಲಾಗಿದೆ. ಸಮ್ಮೇಳನ ಸಂಖ್ಯೆಗಳಿಗೆ ಅನುಗುಣವಾಗಿ ಪುಸ್ತಕಗಳನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

87 ನೇ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಮುದ್ದೇಗೌಡ ಅಧ್ಯಕ್ಷತೆಯಲ್ಲಿ ಪ್ರಕಟನಾ ಸಮಿತಿ ರಚಿಸಲಾಗಿದ್ದು, ಪರಿಷತ್ತಿನ ಪ್ರಕಟಣೆ ಸಮಿತಿಯ ಜೊತೆಗೆ ಈ ಸಮಿತಿ 87 ಪುಸ್ತಕಗಳನ್ನು ಹೊರ ತರುತ್ತಿದೆ. ಮಂಡ್ಯ ಜಿಲ್ಲೆಯ ವಿಶೇಷ ಮತ್ತು ಸಾಧಕರಿಗೆ ಸಂಬಂಧಿಸಿದ ಪುಸ್ತಕಗಳಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದ್ದಾರೆ.

ತೊರವೆ ನರಹರಿಯ ತೊರವೆ ರಾಮಾಯಣದ ಎರಡು ಸಂಪುಟಗಳು ಕೂಡ ಬಿಡುಗಡೆಯಾಗಲಿವೆ. ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ. ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್ ಅವರ ಜೀವನ ಮತ್ತು ಸಾಧನೆ ವಿವರಿಸುವ ಕೃತಿಗಳನ್ನು ಕೂಡ ಪ್ರಕಟಿಸಲಾಗುವುದು. ಮಂಡ್ಯ ತಾಲೂಕುಗಳ ದರ್ಶನ ಕೃತಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read