HomeEntertainmentಹಿರಿಯ ನಟಿ ಸಾಹುಕಾರ್ ಜಾನಕಿ ವಿಧಿವಶ

ಹಿರಿಯ ನಟಿ ಸಾಹುಕಾರ್ ಜಾನಕಿ ವಿಧಿವಶ

ಚೆನ್ನೈ: ದಕ್ಷಿಣ ಭಾರತ ಚಿತ್ರರಂಗದ ಹಿರಿಯ ನಟಿ ಸಾಹುಕಾರ್ ಜಾನಕಿ ಅವರು ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸಾಹುಕಾರ್ ಜಾನಕಿ ಅವರನ್ನು ಚೆನ್ನೈನ ಆಳ್ವಾರ್‌ಪೇಟೆಯಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಶುಕ್ರವಾರ ಮಧ್ಯಾಹ್ನ 1.59ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚೆನ್ನೈನ ತೇನಾಂಪೇಟೆಯಲ್ಲಿರುವ ಸೇಂಟೋಫ್ ರಸ್ತೆಯ ನಿವಾಸದಲ್ಲಿ ಸಾಹುಕಾರ್ ಜಾನಕಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಹಾಗೂ ಅಭಿಮಾನಿಗಳ ಅಂತಿಮ ದರ್ಶನಕ್ಕಾಗಿ ಇಂದು ಸಂಜೆ 5 ಗಂಟೆಯಿಂದ ಇರಿಸಲಾಗುವುದು ಎಂದು ನಾಸರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಾಹುಕಾರ್ ಜಾನಕಿ ನಿಧನಕ್ಕೆ ಇಡೀ ದಕ್ಷಿಣ ಭಾರತ ಚಿತ್ರರಂಗ ಕಂಬನಿ ಮಿಡಿದಿದೆ.

1950ರಲ್ಲಿ ಎಲ್.ವಿ. ಪ್ರಸಾದ್ ನಿರ್ದೇಶನದ ತೆಲುಗಿನ ‘ಸಾಹುಕಾರು’ ಚಿತ್ರದ ಮೂಲಕ ಜಾನಕಿ ಅವರು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಈ ಚಿತ್ರ ನೀಡಿದ ಅಭೂತಪೂರ್ವ ಯಶಸ್ಸಿನಿಂದಾಗಿ ಅವರ ಹೆಸರಿನ ಮುಂದೆ ‘ಸಾಹುಕಾರ್’ ಎಂಬ ಬಿರುದು ಖಾಯಂ ಆಯಿತು. 1952ರ ‘ವಳಯಾಪತಿ’ ಚಿತ್ರದ ಮೂಲಕ ಅವರು ತಮಿಳು ಚಿತ್ರರಂಗ ಪ್ರವೇಶಿಸಿದರು.

ಕನ್ನಡ ಚಿತ್ರರಂಗಕ್ಕೂ ಸಾಹುಕಾರ್ ಜಾನಕಿ ಅವರ ಕೊಡುಗೆ ಅಪಾರ. 1954ರ ‘ದೇವಕನ್ನಿಕಾ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. 1959ರಲ್ಲಿ ಡಾ. ರಾಜ್‌ಕುಮಾರ್ ಅವರೊಂದಿಗೆ ಅಭಿನಯಿಸಿದ ‘ಮಹಿಷಾಸುರ ಮರ್ದಿನಿ’ ಚಿತ್ರವು ಅವರಿಗೆ ಜನಪ್ರಿಯತೆಯನ್ನು ತಂದುಕೊಟ್ಟಿತು. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಅವರು ತಮ್ಮ ಅದ್ಭುತ ಅಭಿನಯದಿಂದ ಕೋಟ್ಯಂತರ ಅಭಿಮಾನಿಗಳ ಮನ ಗೆದ್ದಿದ್ದರು.

ಸಾಹುಕಾರ್ ಜಾನಕಿ ಅವರ ಸುದೀರ್ಘ ಕಲಾ ಸೇವೆಯನ್ನು ಗುರುತಿಸಿ ಭಾರತ ಸರ್ಕಾರ 2022ರಲ್ಲಿ ದೇಶದ ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಿತ್ತು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular