BIG NEWS: ರೈಲ್ವೆ ಕಾಮಗಾರಿ ಹಿನ್ನೆಲೆ: ಈ ಭಾಗದಲ್ಲಿ ರೈಲು ಸಂಚಾರ ರದ್ದು

ಬೆಂಗಳೂರು: ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗದಲ್ಲಿ ರೈಲ್ವೆ ವಿದ್ಯುದ್ದೀಕರಣ ಮತ್ತು ಸುರಕ್ಷತಾ ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಈ ಬಗ್ಗೆ ನೈಋತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಜೂನ್ 1ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದಾಗಲಿವೆ.

ಮೇ 31 ರಿಂದ ನವೆಂಬರ್ 1 ರವರೆಗೆ ಪ್ರತಿ ಶನಿವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) ರದ್ದಾಗಲಿದೆ. ಅದೇ ರೀತಿ, ಜೂನ್ 1 ರಿಂದ ನವೆಂಬರ್ 2 ರವರೆಗೆ ಪ್ರತಿ ಭಾನುವಾರದಂದು ಸಂಚರಿಸುವ ಮಂಗಳೂರು ಜಂಕ್ಷನ್ ಟು ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16540) ಸಹ ರದ್ದಾಗಲಿದೆ.

ಜೂನ್ 1 ರಿಂದ ಅಕ್ಟೋಬರ್ 30 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16575) ರದ್ದಾಗಲಿದೆ.

ಜೂನ್ 2ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಮಂಗಳೂರು ಟು ಯಶವಂತಪುರ ಟಿ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16576) ಸಹ ರದ್ದಾಗಲಿದೆ.

ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಯಶವಂತಪುರ ಟು ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16515) ಹಾಗೂ ಜೂನ್ 3ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಸಂಚರಿಸುವ ಕಾರವಾರ ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನು ಸಹ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read