ಮಹಿಳೆಯರ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೇ“ಸಖಿ ಸುರಕ್ಷಾ“ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ  :  ಗ್ರಾಮೀಣ ಮಹಿಳೆಯರಲ್ಲಿ ಮುಟ್ಟಿನ ಕಪ್ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಸಿಎಸ್ಆರ್ ನಿಧಿಯ ಅಡಿಯಲ್ಲಿ ಗ್ರಾಮೀಣ ಮಹಿಳೆಯರಿಗೆ ಮುಟ್ಟಿನ ಕಪ್ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಮರುಬಳಕೆಗೆ ಸಾಧ್ಯವಾಗಬಲ್ಲ ಈ ಮುಟ್ಟಿನ ಕಪ್ ಗಳನ್ನು ದೀರ್ಘ ಕಾಲ ಬಳಸಬಹುದು, ಸುರಕ್ಷತೆಯನ್ನು ಖಚಿತಪಡಿಸುವ ಈ ಕಪ್ ಗಳು ನೈಸರ್ಗಿಕ ಹಾನಿಯನ್ನು ತಪ್ಪಿಸಲು ಕಾರಣವಾಗುತ್ತವೆ.

ಪ್ರಸ್ತುತ ಮಂಡ್ಯ ಜಿಲ್ಲೆಯಲ್ಲಿ 2200 ಮುಟ್ಟಿನ ಕಪ್ ವಿತರಣೆಗೆ ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಹಂತದಲ್ಲಿ ಆಶಾ ಕಾರ್ಯಕರ್ತೆಯರಿಗೆ ವಿತರಿಸಲಾಗಿದೆ, ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಮುಟ್ಟಿನ ಕಪ್ ಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಮುಂದಿನ ದಿನಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು, ಶಾಲೆಗಳ ಮಹಿಳಾ ಸಿಬ್ಬಂದಿಗಳು, ಗ್ರಾಮ ಪಂಚಾಯಿತಿಯ ಮಹಿಳಾ ಸದಸ್ಯೆಯರು, ಮಹಿಳಾ ಸಹಕಾರ ಸಂಘಗಳ ಸಿಬ್ಬಂದಿಗಳಿಗೆ ವಿತರಿಸಲಾಗುವುದು.ಮುಟ್ಟು ಮೈಲಿಗೆಯೂ ಅಲ್ಲ, ಮುಜುಗರವೂ ಅಲ್ಲ.ಮುಟ್ಟು ನಿಸರ್ಗದ ವೈಶಿಷ್ಠ್ಯ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read