HomeEntertainmentಹೊಸ ಬಿಡುಗಡೆ ದಿನಾಂಕ ಘೋಷಣೆ ಮಾಡಿದ 'ಸಲಾರ್' ಚಿತ್ರದಂಡ

ಹೊಸ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘ಸಲಾರ್’ ಚಿತ್ರದಂಡ

ಪ್ರಶಾಂತ್ ನೀಲ್ ನಿರ್ದೇಶನದ ಡಾರ್ಲಿಂಗ್ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ‘ಸಲಾರ್’  ಸಿನಿಮಾ ಟೀಸರ್ ಇತ್ತೀಚಿಗಷ್ಟೇ ರಿಲೀಸ್ ಆಗಿ ಅತಿ ಹೆಚ್ಚು ವೀಕ್ಷಣೆ ಪಡೆದು ಯೂಟ್ಯೂಬ್ ನಲ್ಲಿ ದಾಖಲೆ ಬರೆದಿತ್ತು.

ಅಂದುಕೊಂಡಂತೆ ಹಾಗಿದ್ದರೆ ಸಲಾರ್ ಈಗಾಗಲೇ ಬಿಡುಗಡೆಯಾಗಬೇಕಿತ್ತು. ಕಾರಣಾಂತರದಿಂದ ಮುಂದೂಡಲಾಯಿತು. ಇಂದು ಚಿತ್ರತಂಡ ಹೊಸ ಬಿಡುಗಡೆ ದಿನಾಂಕವನ್ನು ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದ್ದು, ಡಿಸೆಂಬರ್ 22ರಂದು ಈ ಸಿನಿಮಾ ವಿಶ್ವದ್ಯಂತ ತೆರೆ ಕಾಣಲಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಪ್ರಭಾಸ್ ಅಭಿಮಾನಿಗಳು  ಸಂಭ್ರಮಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನ್ನಡ ಸೇರಿದಂತೆ ಸುಮಾರು ಆರು ಭಾಷೆಗಳಲ್ಲಿ ಈ ಚಿತ್ರ ರಿಲೀಸ್ ಆಗುತ್ತಿದ್ದು, ಹೊಂಬಾಳೆ ಫಿಲಂಸ್ ಬ್ಯಾನರ್ ನಡಿ ವಿಜಯ್ ಕಿರಗಂದೂರ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಪ್ರಭಾಸ್ ಗೆ ಜೋಡಿಯಾಗಿ ಶ್ರುತಿ ಹಾಸನ್ ಅಭಿನಯಿಸಿದ್ದು, ಜಗಪತಿ ಬಾಬು. ಈಶ್ವರಿ ರಾವ್, ಸಪ್ತಗಿರಿ, ಮಧುಗುರುಸ್ವಾಮಿ, ಬ್ರಹ್ಮಜಿ, ಝಾನ್ಸಿ, ರಾಮಚಂದ್ರ ರಾಜು, ನಾಗ ಮಹೇಶ್ ತೆರೆ ಹಂಚಿಕೊಂಡಿದ್ದಾರೆ. ರವಿ ಬಸ್ರೂರ್ ಸಂಗೀತ ಸಂಯೋಜನೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular