ಬೆಂಗಳೂರು : ಸಾಲ- ಶೂಲದ ಹರಿಕಾರ ಸಾಲರಾಮಯ್ಯ ಎಂದು ರಾಜ್ಯ ಬಜೆಟ್ ಗೆ ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ. ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಗೆ ಬಿಜೆಪಿ ಕಿಡಿಕಾರಿದೆ.
ಸಾಲ- ಶೂಲದ ಹರಿಕಾರ ಸಾಲರಾಮಯ್ಯ ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ. ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ ₹1,93,246 ಕೋಟಿ ಸಾಲ ಮಾಡಿದ್ದಾರೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ ₹28 ಸಾವಿರ ಸಾಲ ಹೇರಿದ್ದಾರೆ.
ಸಾಲರಾಮಯ್ಯನವರು ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಲಕ್ಷಾಂತರ ಕೋಟಿ ಸಾಲ ಮಾಡಿ ಕನ್ನಡಿಗರನ್ನು ಸಂಪೂರ್ಣವಾಗಿ ಮುಳುಗಿಸಿದ್ದಾರೆ. ಸಾಲದ ಸುಳಿಗೆ ಕರುನಾಡು ಸಿಲುಕಿದೆ. ಕರ್ನಾಟಕ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಬಿದ್ದಿದೆ. ಆರ್ಥಿಕತೆ ಹಳ್ಳ ಹಿಡಿದಿದೆ ಎಂದು ರಾಜ್ಯ ಬಜೆಟ್ ಗೆ ಬಿಜೆಪಿ ವ್ಯಂಗ್ಯವಾಡಿದೆ.
ಸಾಲ- ಶೂಲದ ಹರಿಕಾರ ಸಾಲರಾಮಯ್ಯ
ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ @siddaramaiah ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ.
ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ ₹1,93,246 ಕೋಟಿ ಸಾಲ ಮಾಡಿದ್ದಾರೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ ₹28 ಸಾವಿರ ಸಾಲ… pic.twitter.com/EROSuKDJca
— BJP Karnataka (@BJP4Karnataka) February 16, 2024
ರೈತ ವಿರೋಧಿ ಬಜೆಟ್
ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್ ಒಂದು ರೈತ ವಿರೋಧಿ ಬಜೆಟ್ ಆಗಿದೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಇದೊಂದು ಶೂನ್ಯ ಬಜೆಟ್. ಕರ್ನಾಟಕ ರಾಜ್ಯವನ್ನು ಈ ಬಜೆಟ್ 20 ವರ್ಷಗಳ ಹಿಂದಕ್ಕೆ ತೆಗೆದುಕೊಂಡು ಹೋಗಿದೆ ಎಂದು ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್ ಒಂದು ರೈತ ವಿರೋಧಿ ಬಜೆಟ್ ಆಗಿದೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಇದೊಂದು ಶೂನ್ಯ ಬಜೆಟ್. ಕರ್ನಾಟಕ ರಾಜ್ಯವನ್ನು ಈ ಬಜೆಟ್ 20 ವರ್ಷಗಳ ಹಿಂದಕ್ಕೆ ತೆಗೆದುಕೊಂಡು ಹೋಗಿದೆ.
– ಶ್ರೀ @BYVijayendra, ರಾಜ್ಯಾಧ್ಯಕ್ಷರು#CongressBogusBudget #SaalaRamaiah pic.twitter.com/xUPFHj3QI0
— BJP Karnataka (@BJP4Karnataka) February 16, 2024