ಸಾರಿಗೆ ನೌಕರರ ಶೇ. 15 ವೇತನ ಹೆಚ್ಚಳ ಬಾಕಿ ಪಾವತಿಗೆ ಆಗ್ರಹ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರಿಗೆ ಶೇ. 15 ರಷ್ಟು ವೇತನ ಹೆಚ್ಚಳ ಬಾಕಿ ಪಾವತಿಸುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಒತ್ತಾಯಿಸಿದೆ.

ಹಿಂದಿನ ಸರ್ಕಾರ 2023ರ ಮಾರ್ಚ್ 17ರಂದು ಸಾರಿಗೆ ನಿಗಮಗಳ ನೌಕರರ ವೇತನವನ್ನು ಶೇಕಡ 15ರಷ್ಟು ಹೆಚ್ಚಳ ಮಾಡಿ ಆದೇಶಿಸಿತ್ತು. 2020ರ ಜನವರಿಯಿಂದ ಅನ್ವಯವಾಗುವಂತೆ ಆದೇಶದಲ್ಲಿ ತಿಳಿಸಲಾಗಿತ್ತು. ನೌಕರರಿಗೆ ನ್ಯಾಯಯುತವಾಗಿ ಬರಬೇಕಿರುವ ಬಾಕಿ ವೇತನ ಹೆಚ್ಚಳ ಪಾವತಿಸಬೇಕು. ಸರ್ಕಾರ ಮತ್ತು ಸಾರಿಗೆ ಇಲಾಖೆಗಳು ಈ ನಿಟ್ಟಿನಲ್ಲಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಒತ್ತಾಯಿಸಿದೆ.

ವೇತನ ಬಾಕಿ ಪಾವತಿ ಜೊತೆಗೆ ಭವಿಷ್ಯ ನಿಧಿ ವಂತಿಗೆ, ತುಟ್ಟಿ ಭತ್ಯೆ, ರಜಾ ನಗದಿಕರಣ ಪಾವತಿಸದೆ ನಿಗಮಗಳು ಹಿಂದೇಟು ಹಾಕುತ್ತಿದ್ದು, ನೌಕರರಿಗೆ ಸಮಸ್ಯೆ ಆಗಿರುವುದರಿಂದ ಈ ನಿಟ್ಟಿನಲ್ಲಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read