HomeIndiaವೇತನ ಹೆಚ್ಚಳ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಫಿಟ್ ಮೆಂಟ್, ತುಟ್ಟಿ ಭತ್ಯೆ ಏರಿಕೆ...

ವೇತನ ಹೆಚ್ಚಳ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಫಿಟ್ ಮೆಂಟ್, ತುಟ್ಟಿ ಭತ್ಯೆ ಏರಿಕೆ ಸಾಧ್ಯತೆ

ನವದೆಹಲಿ: ವೇತನ ಹೆಚ್ಚಳ ನಿರೀಕ್ಷೆಯಲ್ಲಿರುವ ಕೇಂದ್ರ ಸರ್ಕಾರಕ್ಕೆ ನೌಕರರಿಗೆ ಸಿಹಿ ಸುದ್ದಿ ಇಲ್ಲಿದೆ. ನೌಕರರ ಕನಿಷ್ಠ ವೇತನದಲ್ಲಿ ಬದಲಾವಣೆಯಾಗುವ ಫಿಟ್ಮೆಂಟ್ ಅಂಶ ಮತ್ತು ತುಟ್ಟಿಭತ್ಯೆಯನ್ನು ಶೀಘ್ರದಲ್ಲೇ ಸರ್ಕಾರ ಪ್ರಕಟಿಸುವ ಸಾಧ್ಯತೆ ಇದೆ.

ಫಿಟ್ಮೆಂಟ್ ಏರಿಕೆಯಾದ ನಂತರ ಕೇಂದ್ರ ಸರ್ಕಾರಿ ನೌಕರರ ಕನಿಷ್ಠ ವೇತನ 18,000 ದಿಂದ 26,000 ರೂ.ಗೆ ಹೆಚ್ಚಾಗುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ನೌಕರರು ಶೇಕಡ 3.68ಕ್ಕೆ ಫಿಟ್ ಮೆಂಟ್ ಹೆಚ್ಚಳ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಡಿಎ ಮತ್ತು ಡಿಆರ್ ಗಳನ್ನು ಜನವರಿ 1 ಹಾಗೂ ಜುಲೈ 1 ರಂತೆ ವರ್ಷಕ್ಕೆ ಎರಡು ಸಲ ಪರಿಷ್ಕರಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2002ರ ಸೆಪ್ಟಂಬರ್ ನಲ್ಲಿ ಕೊನೆಯ ಸಲ ಪರಿಷ್ಕರಣೆಯಾಗಿದ್ದು, 48 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68 ಲಕ್ಷ ಪಿಂಚಣಿದಾರಾರಿಗೆ ಶೇಕಡ 4ರಷ್ಟು ಡಿಎ ಹೆಚ್ಚಳ ಮಾಡಲಾಗಿತ್ತು. ಶೇ. 38 ಕ್ಕೆ ಡಿಎ ಹೆಚ್ಚಳವಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular