‘ಗ್ಯಾರಂಟಿ ಯೋಜನೆ’ಗಾಗಿ ಪೊಲೀಸ್ ಸಿಬ್ಬಂದಿ ಸಂಬಳ ನಿಲ್ಲಿಸಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

ನವದೆಹಲಿ : ಗ್ಯಾರಂಟಿ ಯೋಜನೆಗಾಗಿ ಪೊಲೀಸ್ ಸಿಬ್ಬಂದಿ ಸಂಬಳ ನಿಲ್ಲಿಸಿಲ್ಲ, ಅದಕ್ಕೆ ಬೇರೆ ಕಾರಣವಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್ ಆಡಳಿತ ವ್ಯವಸ್ಥೆ ಹಾಗೂ ಬೇರೆ ಬೇರೆ ಕಾರಣಗಳಿಂದ ಪೊಲೀಸ್ ಸಿಬ್ಬಂದಿಗಳ ಸಂಬಳ ನಿಲ್ಲಿಸಲಾಗುತ್ತಿದೆ. ನೌಕರರ ಸಂಬಳ ತಡೆದು ಗ್ಯಾರಂಟಿ ಯೋಜನೆ ನೀಡುವ ಅಗತ್ಯವಿಲ್ಲ ಎಂದರು.

ಗ್ಯಾರಂಟಿ ಯೋಜನೆಗೆ ಎಷ್ಟು ಹಣ ಬೇಕೋ ಅಷ್ಟು ಸರ್ಕಾರ ಬಜೆಟ್ ನಲ್ಲಿ ಮೀಸಲಿಟ್ಟಿದೆ. ಗ್ಯಾರಂಟಿ ಯೋಜನೆಗಾಗಿ ಪೊಲೀಸ್ ಸಿಬ್ಬಂದಿ ಸಂಬಳ ನಿಲ್ಲಿಸಿಲ್ಲ ಎಂದರು. ಸ್ಥಳೀಯ ಶಾಸಕರು, ನಾಯಕರಿಂದ ಆಕ್ಷೇಪ ಬಂದ ಹಿನ್ನೆಲೆ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ತಡೆ ನೀಡಲಾಗಿದೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read