ಗಮನಿಸಿ : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದಿನಿಂದ ಸೆ.30 ರವರೆಗೆ ‘ಮದ್ಯ’ ಮಾರಾಟ ನಿಷೇಧ

ಬೆಂಗಳೂರು : ಬೆಂಗಳೂರಿನ ಹಲವೆಡೆ ಗಣೇಶ ವಿಸರ್ಜನೆ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಕೇಂದ್ರ, ಉತ್ತರ, ಪೂರ್ವ ಹಾಗೂ ಈಶಾನ್ಯ ವಿಭಾಗದಲ್ಲಿ ಸೆ.30 ರವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

ನಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ.

ಇಂದು ಬೆಳಗ್ಗೆ 6ರಿಂದ ಸೆ.22ರ ಬೆಳಗ್ಗೆ 6ರವರೆಗೆ ಬೆಂಗಳೂರಿನ ಉತ್ತರ ವಲಯದ ಹೆಬ್ಬಾಳ, ಜೆಪಿ ನಗರ, ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಸೆ.23 ಬೆಳಗ್ಗೆ 6ರಿಂದ ಸೆ.24ರ ಬೆಳಗ್ಗೆ 6ರವರೆಗೆ ಪೂರ್ವ ವಲಯದ ಡಿ.ಜೆ ಹಳ್ಳಿ, ಪುಲಕೇಶಿ ನಗರ, ಭಾರತಿನಗರ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಎಣ್ಣೆ ಮಾರಾಟ ಬಂದ್ ಮಾಡಲು ಸೂಚಿಸಲಾಗಿದೆ.

ಸೆ.24ರ ಬೆಳಗ್ಗೆ 6ರಿಂದ ಸೆ.25ರ ಬೆಳಗ್ಗೆ 6 ಗಂಟೆಯವರೆಗೆ ಪೂರ್ವ ವಿಭಾಗದ ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಹಲಸೂರು ಗೇಟ್ ವ್ಯಾಪ್ಟಿ ಪೊಲೀಸ್ ಠಾಣೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈಶಾನ್ಯ ವಿಭಾಗದ ಯಲಹಂಕ ಉಪನಗರ, ಕೂಡಿಗೆಹಳ್ಳಿ, ಯಲಹಂಕ, ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.23ರ ಸಂಜೆ 6ರಿಂದ ಸೆ.25ರ ಬೆಳಗ್ಗೆ 6 ಗಂಟೆಯವರೆಗೆ, ಕೇಂದ್ರ ವಿಭಾಗದ ಹೈಗ್ರೌಂಡ್ ಠಾಣೆ ವ್ಯಾಪ್ತಿಯಲ್ಲಿ ಸೆ.30ರ ಬೆಳಗ್ಗೆ 6ರಿಂದ ಅಕ್ಟೋಬರ್.1ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read