ಮದ್ಯ ಪ್ರಿಯರೇ ಗಮನಿಸಿ : ಅ.24 ರಂದು ಈ ಜಿಲ್ಲೆಯಲ್ಲಿ ‘ಮದ್ಯ’ ಮಾರಾಟ ನಿಷೇಧ

ಮಡಿಕೇರಿ : ದಸರಾ ಆಚರಣೆ ಹಿನ್ನಲೆಯಲ್ಲಿ ಮಡಿಕೇರಿ ನಗರದ ಹಲವು ಕಡೆ ಅಕ್ಟೋಬರ್, 24 ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್, 25 ರ ಬೆಳಗ್ಗೆ 10 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ನಾಡಹಬ್ಬ ದಸರಾ ಆಚರಣೆ ಹಿನ್ನಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ನನಗೆ ದತ್ತವಾಗಿರುವ ಅಧಿಕಾರದಂತೆ ಅಕ್ಟೋಬರ್, 24 ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್, 25 ರ ಬೆಳಗ್ಗೆ 10 ಗಂಟೆಯವರೆಗೆ ಮಡಿಕೇರಿ ನಗರ ಠಾಣಾ ಸರಹದ್ದಿನ ಸುತ್ತಮುತ್ತ 10 ಕಿ.ಮೀ ವ್ಯಾಪ್ತಿಯಲ್ಲಿ ಮತ್ತು ಗೋಣಿಕೊಪ್ಪ, ಪೊನ್ನಂಪೇಟೆ ಠಾಣಾ ಸರಹದ್ದಿನ ಸುತ್ತಮುತ್ತ 10 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್, ರೆಸ್ಟೋರೆಂಟ್ ಮತ್ತು ಕ್ಲಬ್ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ ರಾಜಾ ಅವರು ಆದೇಶ ಹೊರಡಿಸಿದ್ದಾರೆ.

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read