ನಾಳೆಯಿಂದ ಮೂರು ದಿನ ಕೊಡಗು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ಮದ್ಯ’ ಮಾರಾಟ ನಿಷೇಧ

ಮಡಿಕೇರಿ : ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಆಗಸ್ಟ್, 12, 13 ಮತ್ತು 14 ರಂದು ನಡೆಯಲಿರುವ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಪಂಜಿನ ಮೆರವಣಿಗೆ ಹಾಗೂ ಸಭಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965 ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

ಆಗಸ್ಟ್, 11 ರ ಮಧ್ಯರಾತ್ರಿ 12 ಗಂಟೆಯಿಂದ ಆಗಸ್ಟ್, 13 ರ ಬೆಳಗ್ಗೆ 6 ಗಂಟೆಯವರೆಗೆ ಮಾದಾಪುರ ಹಾಗೂ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ, ಆಗಸ್ಟ್, 12 ರಂದು ಮಧ್ಯರಾತ್ರಿ 12 ಗಂಟೆಯಿಂದ ಆಗಸ್ಟ್, 13 ರ ಮಧ್ಯರಾತ್ರಿ 12 ಗಂಟೆಯವರೆಗೆ ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಪಟ್ಟಣ ವ್ಯಾಪ್ತಿಯ ಸುತ್ತಮುತ್ತಲಿನ 10 ಕಿ,ಮೀ. ಹಾಗೂ ಆಗಸ್ಟ್, 14 ರ ಬೆಳಗ್ಗೆ 6 ಗಂಟೆಯಿಂದ ಆಗಸ್ಟ್, 14 ರ ಮಧ್ಯರಾತ್ರಿ 12 ಗಂಟೆಯವರೆಗೆ ಕುಶಾಲನಗರ ಪಟ್ಟಣ ಹಾಗೂ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್, ರೆಸ್ಟೋರೆಂಟ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read