ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
26 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಟ ಸಲ್ಮಾನ್ ಕಾನ್ ಕಾರಿನಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಆರೋಪಿ ವಾಟ್ಸಾಪ್ ಸಂದೇಶದ ಮೂಲಕ ಬೆದರಿಕೆ ಹಾಕಿದ್ದ. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಆರೋಪಿಗಾಗಿ ಶೋಧ ನಡೆಸಿದ್ದರು. ಸದ್ಯ ಬೆದರಿಕೆ ಹಾಕಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಯುವಕ ಮಾನಸಿಕ ಅಸ್ವಸ್ಥ ಎಂದು ಆತನ ಪೋಷಕರು ಪೊಲೀಸರಿಗೆ ತಿಳಿಸಿದ್ದಾರೆ. ವಿಚಾರಣೆ ಮುಂದುವರೆದಿದೆ.