BIG NEWS: ಸಲ್ಮಾನ್ ಖಾನ್ ಗೆ ಬೆದರಿಕೆ ಕರೆ: ಆರೋಪಿಗಾಗಿ ಪೊಲೀಸರಿಂದ ಹುಬ್ಬಳ್ಳಿಯಲ್ಲಿ ಶೋಧ

ಹುಬ್ಬಳ್ಳಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಪದೇ ಪದೇ ಬೆದರಿಕೆ ಕರೆಗಳು ಬರುತ್ತಿವೆ. ಗ್ಯಾಂಗ್ ಸ್ಟರ್ ಲಾರೆನ್ಸ್ ಭಿಷ್ಣೋಯ್ ಗ್ಯಾಂಗ್ ನಿಂದ ಜೀವ ಬೆದರಿಕೆ ಬರುತ್ತಿದೆ. ನಿನ್ನೆ ಕೂಡ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿತ್ತು. ಪ್ರಕರಣ ಸಂಬಂಧ ಮುಂಬೈ ಪೊಲೀಸರು ಹುಬ್ಬಳ್ಳಿಯಲ್ಲಿ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿರುವ ಆರೋಪಿ ಹುಬ್ಬಳ್ಳಿಯಲ್ಲಿ ಅಡಗಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹಾಗೂ ಮುಂಬೈ ಪೊಲೀಸರು ಹುಬ್ಬಳ್ಳಿಯಲ್ಲಿ ಆರೋಪಿಗಾಗಿ ಶೋಧ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಲಾರೆನ್ಸ್ ಬಿಷ್ಣೋಯ್ ಸಹೋದರ ಎಂದು ಹೇಳಿಕೊಂಡು ಮುಂಬೈ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂ ಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ಸಲ್ಮಾನ್ ಖಾನ್ ನಮ್ಮ ದೇವಸ್ಥಾನದಲ್ಲಿ ಕ್ಷಮೆ ಕೇಳಬೇಕು ಇಲ್ಲವೇ 5 ಕೋಟಿ ಹಣ ನೀಡಬೇಕು. ಇಲ್ಲದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ. ಕರ್ನಾಟಕದಿಂದ ಈ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಸದ್ಯ ಮುಂಬೈ ಪೊಲೀಸರು ಹುಬ್ಬಳ್ಳಿಗೆ ಬಂದಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read