HomeEntertainmentಸಲ್ಮಾನ್ ಖಾನ್ ಗೆ ಬಿಷ್ಣೋಯ್ ಸಹೋದರನಿಂದ ಮತ್ತೊಂದು ಬೆದರಿಕೆ

ಸಲ್ಮಾನ್ ಖಾನ್ ಗೆ ಬಿಷ್ಣೋಯ್ ಸಹೋದರನಿಂದ ಮತ್ತೊಂದು ಬೆದರಿಕೆ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ ಹಾಕಲಾಗಿದೆ. ಗ್ಯಾಂಗ್ ಸ್ಟರ್ ಲಾರೆನ್ಸ್ ಭಿಷ್ಣೋಯ್ ಸಹೋದರನಿಂದ ಕೊಲೆ ಬೆದರಿಕೆ ಹಾಕಲಾಗಿದೆ.

ಕಳೆದ ಒಂದು ವಾರದಲ್ಲಿ ಇದು ಎರಡನೇ ಬೆದರಿಕೆ ಸಂದೇಶವಾಗಿದೆ. ಮುಂಬೈ ಟ್ರಾಫಿಕ್ ಕಂಟ್ರೋಲ್ ರೂಂ ಗೆ ಲಾರೆನ್ಸ್ ಭಿಷ್ಣೋಯ್ ಸಹೋದರ ವಾಟ್ಸಪ್ ಸಂದೇಶ ರವಾನಿಸಿ, ಸಲ್ಮಾನ್ ಖಾನ್ ಗೆ ಜೀವ ಬೆದರಿಕೆಯೊಡ್ಡಿದ್ದಾನೆ ಎನ್ನಲಾಗಿದೆ.

ಸಲ್ಮಾನ್ ಖಾನ್ ನಮ್ಮ ದೇವಸ್ಥಾನಕ್ಕೆ ತೆರಳಿ ಕ್ಷಮೆಯಾಚಿಸಬೇಕು ಅಥವಾ 5 ಕೋಟಿ ರೂಪಾಯಿ ಕೊಡಬೇಕು. ಇಲ್ಲದಿದ್ದಲ್ಲಿ ಆತನನ್ನು ಕೊಲೆ ಮಾಡುವುದಾಗಿ ಬೆದರಿಕೆ ಸಂದೇಶ ರವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅ.30ರಂದು ಮುಂಬೈ ಪೊಲೀಸರಿಗೆ ಕರೆ ಮಾಡಿ 2 ಕೋಟಿ ಕೊಡದಿದ್ದರೆ ಸಲ್ಮಾನ್ ಖಾನ್ ನನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಸಂದೇಶ ಬಂದಿತ್ತು. ಈ ಘಟನೆ ಬಳಿಕ ಮುಂಬೈನ ವರ್ಲಿ ಪೊಲೀಸರು ಅಪರಿಚಿತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ನಡುವೆ ಇದೀಗ ಮತ್ತೆ ಸಲ್ಮಾನ್ ಖಾನ್ ಗೆ ಬೆದರಿಕೆ ಕರೆ ಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular