‘ಸಾಲುಮರದ ತಿಮ್ಮಕ್ಕ’ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ : ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ದತ್ತುಪುತ್ರ ವನಸಿರಿ ಉಮೇಶ್ ‘ ಆತ್ಮೀಯ ನನ್ನ ದೇಶದ ಮತ್ತು ನನ್ನ ನಾಡಿನ ಜನತೆಗೆ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಶುಭಾಶಯಗಳು ನಿಮ್ಮೆಲ್ಲರ ಪ್ರೀತಿ ಹಾರೈಕೆ ಆಶೀರ್ವಾದದಿಂದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ನಿಮ್ಮೆಲ್ಲರ ಆಶೀರ್ವಾದದಿಂದ ಇಂದು ಆಸ್ಪತ್ರೆಯಿಂದ ಮನೆಗೆ ಡಿಸ್ಚಾರ್ಜ್ ಆಗಿ ಬರುತ್ತಿದ್ದಾರೆ.  ಈ ವಿಷಯವನ್ನು ತಮ್ಮೆಲ್ಲರಿಗೂ ತಿಳಿಸಲು ಹರ್ಷಿಸುತ್ತೇನೆ ನಿಮ್ಮೆಲ್ಲರ ಆಶೀರ್ವಾದ ಸದಾ ಇರಲಿ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕನವರ ಜೀವನ ಆಕೆಯ ನಡೆದುಬಂದ ದಾರಿ ವಿಶ್ವಕ್ಕೆ ಮಾದರಿಯಾಗಲಿ ನಮಸ್ಕಾರ ‘ ನಿಮ್ಮ ಪ್ರೀತಿಯ ಉಮೇಶ್ ಸಾಲುಮರದ ತಿಮ್ಮಕ್ಕ ಎಂದು ಪೋಸ್ಟ್ ಮಾಡಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read