HomeIndiaBREAKING: ಅಯೋಧ್ಯೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸಮಾಜವಾದಿ ಪಕ್ಷದ ಅವದೇಶ್ ಪ್ರಸಾದ್ ಗೆಲುವು

BREAKING: ಅಯೋಧ್ಯೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸಮಾಜವಾದಿ ಪಕ್ಷದ ಅವದೇಶ್ ಪ್ರಸಾದ್ ಗೆಲುವು

ಉತ್ತರ ಪ್ರದೇಶದ ಅಯೋಧ್ಯಾ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷ ಅಭ್ಯರ್ಥಿ ಅವದೇಶ್ ಪ್ರಸಾದ್, ಬಿಜೆಪಿ ಅಭ್ಯರ್ಥಿ ಲಾಲು ಸಿಂಗ್ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಧಿಕಾರಾವಧಿಯಲ್ಲಿ ನಿರ್ಮಾಣಗೊಂಡ ಭವ್ಯ ರಾಮಮಂದಿರ ಕಳೆದ ಜನವರಿ ತಿಂಗಳಿನಲ್ಲಿ ಭಕ್ತರಿಗೆ ತೆರೆದುಕೊಂಡಿದ್ದು, ಚುನಾವಣೆಯಲ್ಲಿ ರಾಮಮಂದಿರದ ನಿರ್ಮಾಣದ ಈ ವಿಷಯ ಪ್ರಭಾವ ಬೀರಬಹುದು ಎಂದು ಭಾವಿಸಲಾಗಿತ್ತು.

ಆದರೆ ಅಯೋಧ್ಯಾ ಲೋಕಸಭಾ ಕ್ಷೇತ್ರದಲ್ಲೇ ಬಿಜೆಪಿ ಪರಾಭವಗೊಂಡಿರುವುದು ಪಕ್ಷದ ನಾಯಕರನ್ನು ದಿಗ್ಭ್ರಮೆಗೊಳಿಸಿದೆ. ಉತ್ತರ ಪ್ರದೇಶದಲ್ಲಿ ಇಂಡಿಯಾ ಮೈತ್ರಿಕೂಟ ಭರ್ಜರಿ ಯಶಸ್ಸು ಸಾಧಿಸಿ ಬಿಜೆಪಿಗೆ ಮತ್ತೊಂದು ಶಾಕ್ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular