ಬೆಂಗಳೂರು: ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ನಿಧನರಾಗಿರುವ ಹಿನ್ನೆಲೆಯಲ್ಲಿ ವಿಧಾನ ಸಭೆಯ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಂದೂಡಲಾಗಿದೆ.
ವಿಧಾನಸಭಾ ನೂತನ ಸದಸ್ಯರಾದ ಉಮೇಶ್ ಮೇಟಿ ಹಾಗೂ ಸಮರ್ಥಶಾಮನೂರು ಅವರ ಪ್ರಮಾಣವಚನ ಕಾರ್ಯಕ್ರಮವನ್ನು ಮೇ.11, ನಾಳೆ ಬೆಳಿಗ್ಗೆ ವಿಧನಸೌಧದಲ್ಲಿ ನಿಗದಿಪಡಿಸಲಾಗಿತ್ತು. ಆದರೆ ಇದೀಗ ಮುಂದೂಡಿಕೆಯಾಗಿದೆ.
ಬಾಗಲಕೋಟೆ ವಿಧಾನಸಭಾ ಶಾಸಕರಾದ ಹೆಚ್.ವೈ. ಮೇಟಿ ಹಾಗೂ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶಾಮನೂರು ಶಿವಶಂಕರಪ್ಪ ಇವರುಗಳ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಾಲಗಕೋಟೆ ಹಾಗೂ ದಾವಣಗೆರೆ ಕ್ಷೇತ್ರದಿಂದ ಆಯ್ಕೆಯಾಗಿರುವ ಉಮೇಶ ಹುಲ್ಲಪ್ಪ ಮೇಟಿ ಹಾಗೂ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ರವರುಗಳು ಆಯ್ಕೆಯಾಗಿದ್ದಾರೆ. ಇವರು ವಿಧಾನಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ಮೇ.11ರಂದು ಬೆಳಗ್ಗೆ 10.00 ಗಂಟೆಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ:334ರಲ್ಲಿ ನಿಗದಿಪಡಿಸಲಾಗಿತ್ತು. ಆದರೆ ಸಚಿವ ಡಿ.ಸುಧಾಕರ್ ಅವರ ನಿಧನದ ಕಾರಣ ಮುಂದೂಡಲಾಗಿದೆ ಎಂದು ವಿಧಾನ ಸಭೆಯ ಕಛೇರಿ ಪ್ರಕಟಣೆ ತಿಳಿಸಿದೆ.

