HomeKarnatakaSHOCKING: ಮೈಮೇಲೆ ಬಿಸಿ ಸಾರು ಬಿದ್ದು ಮೂರು ವರ್ಷದ ಮಗು ಸಾವು

SHOCKING: ಮೈಮೇಲೆ ಬಿಸಿ ಸಾರು ಬಿದ್ದು ಮೂರು ವರ್ಷದ ಮಗು ಸಾವು

ದಾವಣಗೆರೆ: ಮೈಮೇಲೆ ಕುದಿಯುವ ಸಾರು ಬಿದ್ದು ಮೂರು ವರ್ಷದ ಮಗು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಮಿಥುನ್(3) ಮೃತಪಟ್ಟ ಮಗು. ಮನೆಯಲ್ಲಿ ಎತ್ತರದ ಕಟ್ಟಿಯ ಮೇಲೆ ಸ್ಟವ್ ಮೇಲೆ ಕುದಿಯುತ್ತಿದ್ದ ಸಾರಿನ ಪಾತ್ರೆಯನ್ನು ಮಗು ಎಳೆದಿದ್ದರಿಂದ ಸುಡುವ ಸಾರು ಮೈಮೇಲೆ ಬಿದ್ದಿದೆ. ಇದರ ಪರಿಣಾಮ ಸುಟ್ಟ ಗಾಯಗಳಾಗಿದ್ದ ಮಗುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದೆ. ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular