HomeIndiaಏ. 18 ರಿಂದ ಸಲಿಂಗ ವಿವಾಹ ಅರ್ಜಿಗಳ ವಿಚಾರಣೆಗೆ ಐವರು ನ್ಯಾಯಮೂರ್ತಿಗಳ ಪೀಠ ರಚಿಸಿದ ಸುಪ್ರೀಂ...

ಏ. 18 ರಿಂದ ಸಲಿಂಗ ವಿವಾಹ ಅರ್ಜಿಗಳ ವಿಚಾರಣೆಗೆ ಐವರು ನ್ಯಾಯಮೂರ್ತಿಗಳ ಪೀಠ ರಚಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಏಪ್ರಿಲ್ 18 ರಿಂದ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಈ ಪೀಠವು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ.ಎಸ್.ನರಸಿಂಹ ಅವರನ್ನು ಒಳಗೊಂಡಿರುತ್ತದೆ. ಮಾರ್ಚ್ 13 ರಂದು, ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಮತ್ತು ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಅರ್ಜಿಗಳನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾರ್ಚ್‌ ನಲ್ಲಿ ಭಾರತ ಸರ್ಕಾರವು ಅರ್ಜಿಗಳನ್ನು ವಿರೋಧಿಸಿ ತನ್ನ ಪ್ರತಿ-ಅಫಿಡವಿಟ್ ಅನ್ನು ಸಲ್ಲಿಸಿತು. ಇದು ಶಾಸಕಾಂಗ ತೀರ್ಮಾನಕ್ಕೆ ಬಿಟ್ಟ ವಿಚಾರ. ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡುವುದನ್ನು ವಿರೋಧಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ಕೇಂದ್ರವು ತನ್ನ ಅಫಿಡವಿಟ್‌ನಲ್ಲಿ, ಸಲಿಂಗ ಸಂಬಂಧಗಳು ಮತ್ತು ಭಿನ್ನಲಿಂಗೀಯ ಸಂಬಂಧಗಳು ಸ್ಪಷ್ಟವಾಗಿ ವಿಭಿನ್ನ ವರ್ಗಗಳಾಗಿದ್ದು, ಅವುಗಳನ್ನು ಒಂದೇ ರೀತಿ ಪರಿಗಣಿಸಲಾಗುವುದಿಲ್ಲ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular