ಮಂಗಳೂರು: ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂ.ಡಿ ಬೆಳ್ತಂಗಡಿ ಠಾಣೆಗೆ ಎರಡನೇ ದಿನದ ವಿಚಾರಣೆಗೆ ಹಾಜರಾಗಿದ್ದಾರೆ.
ಸುಮೋಟೋ ಕೇಸ್ ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮೀರ್ ಎಂ.ಡಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ನಿನ್ನೆ ವಿಚಾರಣೆಗೆ ಹಾಜರಾಗಿದ್ದ ಸಮೀರ್ ನನ್ನು ಬರೋಬ್ಬರಿ 7 ಗಂಟೆಗಳ ಕಾಲ ಪೊಲೀಸರು ವಿಚಾರಣೆ ನಡೆಸಿದ್ದರು. ಬಳಿಕ ಇಂದು ಕೂಡ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.
ಇದೀಗ ಎರಡನೇ ದಿನದ ವಿಚಾರಣೆ ಹಿನ್ನೆಲೆಯಲ್ಲಿ ಸಮೀರ್ ಎಂಡಿ ಬೆಳ್ತಂಗಡಿ ಠಾಣೆಗೆ ಹಾಜರಾಗಿದ್ದಾರೆ. ಇಬ್ಬರು ವಕೀಲರ ಜೊತೆ ಸಮೀರ್ ವಿಚಾರಣೆಗೆ ಹಾಜರಾಗಿದ್ದಾರೆ.