HomeLatest Newsಬನ್ನೇರುಘಟ್ಟದ ಆನೆ ಮರಿಗೆ ನೀರಾನೆ ದಾಳಿಗೆ ಬಲಿಯಾದ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು

ಬನ್ನೇರುಘಟ್ಟದ ಆನೆ ಮರಿಗೆ ನೀರಾನೆ ದಾಳಿಗೆ ಬಲಿಯಾದ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು

ಬೆಂಗಳೂರು: ಶಿವಮೊಗ್ಗ ಮೃಗಾಲಯದಲ್ಲಿ ಇತ್ತೀಚೆಗೆ ನೀರಾಅನೆ ದಾಅಳಿಗೆ ಬಲಿಯಾದ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರನ್ನು ಬನ್ನೇರುಘಟ್ಟದಲ್ಲಿ ಜನಿಸಿದ ಆನೆ ಮರಿಗೆ ಇಡುವುದಾಗಿ ಮೃಗಾಲಯ ಸಿಬ್ಬಂದಿ ತಿಳಿಸಿದ್ದಾರೆ.

ಬನ್ನೇರುಘಟ್ಟ ಉದ್ಯಾಅನವನದಲ್ಲಿ ಇತ್ತೀಚೆಗೆ ಜನಿಸಿದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರನ್ನು ನಾಮಕರಣ ಮಾಡುವುದಾಅಗಿ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ತಿಳಿಸಿದ್ದಾರೆ.

ಶಿವಮೊಗ್ಗದ ಮೃಗಾಲಯಕ್ಕೆ ಭೇಟಿ ನೀಡಿದ್ದ ಅವರು ಅಧಿಕಾರಿಗಳ ಬಳಿ ಮಾಹಿತಿ ಪಡೆದರು. ಈ ವೇಳೆ ಮಾತನಾಡಿದ ಅವರು ಡಾ.ಸಮೀಕ್ಷಾ ರೆಡ್ಡಿ ಅವರಿಗೆ ಹುತಾತ್ಮ ಪಟ್ಟ ನೀಡುವ ಬಗ್ಗೆಯೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಾ.ಸಮೀಕ್ಷಾ ರೆಡ್ಡಿ ಸಾವು ಆಘಾತ ತಂದಿದೆ. ಇಂತಹ ಘಟನೆ ನಡೆಯಬಾರದಿತ್ತು. ಪೊಲೀಸ್ ಹಾಗೂ ಅರಣ್ಯ ಇಲಾಖೆಯಿಂದ ಪ್ರಕರಣದ ತನಿಖೆ ನಡೆಯುತ್ತಿದೆ. ವರದಿ ಬಂದ ಬಳಿಕ ಯಾರೇ ತಪ್ಪಿತಸ್ಥರಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನು ನೀರಾನೆ ಎರಡು ಬಾರಿ ಮರಿ ಕಳೆದುಕೊಂಡಿತ್ತು. ಮೂರನೇ ಬಾರಿ ಗರ್ಭ ಧರಿಸಿತ್ತು. ಈ ಬಾರಿಯಾದರೂ ಮರಿ ಉಳಿಸಿಕೊಳ್ಳಬೇಕು ಎಂಬ ಕಾಳಜಿಯಿಂದ ಸಮೀಕ್ಷಾ ಮೇಲೆ ದಾಳಿ ಮಾಡಿರಬಹುದು ಎಂಬ ಶಂಕೆ ಇದೆ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular