HomeEntertainmentಸಂಯುಕ್ತ ಮೆನನ್ ಹುಟ್ಟುಹಬ್ಬಕ್ಕೆ ಉಡುಗೊರೆ ನೀಡಿದ 'ಡೆವಿಲ್' ಚಿತ್ರತಂಡ

ಸಂಯುಕ್ತ ಮೆನನ್ ಹುಟ್ಟುಹಬ್ಬಕ್ಕೆ ಉಡುಗೊರೆ ನೀಡಿದ ‘ಡೆವಿಲ್’ ಚಿತ್ರತಂಡ

ಸಂಯುಕ್ತ ಮೆನನ್ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಂದಮೂರಿ ಕಲ್ಯಾಣ್ ರಾಮ್ ಅಭಿನಯದ ʼಡೆವಿಲ್ʼ ಸಿನಿಮಾದಲ್ಲಿ ಸಂಯುಕ್ತ ಮೆನನ್ ನಾಯಕಿಯಾಗಿ ಅಭಿನಯಿಸಿದ್ದು, ಡೆವಿಲ್ ಚಿತ್ರ ತಂಡ ಇಂದು ಅವರ ಪಾತ್ರವನ್ನು ರಿವಿಲ್ ಮಾಡಿದ್ದಾರೆ.

ಈ ಚಿತ್ರದಲ್ಲಿ ಸಂಯುಕ್ತ ಮೆನನ್ ನೈಶಾದ ಎಂಬ ಪಾತ್ರದಲ್ಲಿ ಅಭಿನಯಿಸಿದ್ದು, ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಂಯುಕ್ತ ಮೆನನ್ ಅವರಿಗೆ  ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ವರ್ಷ ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ 2’ ನಲ್ಲಿ ಕಾಣಿಸಿಕೊಂಡಿದ್ದ ಸಂಯುಕ್ತ ಮೆನನ್ ಇತ್ತೀಚಿಗೆ ವಿರೂಪಾಕ್ಷ ಎಂಬ ತೆಲುಗು ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ದರು.

ಇದೀಗ ಡೆವಿಲ್ ಚಿತ್ರದಲ್ಲಿ ನಟಿಸಿದ್ದು, ನವೆಂಬರ್ 24ಕ್ಕೆ ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ, ಹಾಗೂ ಹಿಂದಿ ಭಾಷೆಯಲ್ಲಿ ಈ ಸಿನಿಮಾ ತೆರೆ ಕಾಣಲಿದೆ.

For Latest News Updates, Join Our Whatsapp Community🚩
RELATED ARTICLES

Most Popular