HomeIndiaಸನಾತನ ಧರ್ಮದ ಹೇಳಿಕೆ: ಸಚಿವ ಉದಯನಿಧಿ ಸ್ಟಾಲಿನ್ ತಲೆಗೆ 10 ಕೋಟಿ ರೂ. ಬಹುಮಾನ ಘೋಷಿಸಿದ...

ಸನಾತನ ಧರ್ಮದ ಹೇಳಿಕೆ: ಸಚಿವ ಉದಯನಿಧಿ ಸ್ಟಾಲಿನ್ ತಲೆಗೆ 10 ಕೋಟಿ ರೂ. ಬಹುಮಾನ ಘೋಷಿಸಿದ ಅಯೋಧ್ಯೆ ಅರ್ಚಕ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ಸಂತ ಪರಮಹಂಸ ಆಚಾರ್ಯ ಅವರು ಸೋಮವಾರ ಖಡ್ಗ ಬಳಸಿ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ಭಾವಚಿತ್ರದ ಸಾಂಕೇತಿಕ ‘ಶಿರಚ್ಛೇದ’ ನಡೆಸಿ ನಂತರ ಪೋಸ್ಟರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಸಚಿ ಉದಯನಿಧಿ ಸ್ಟಾಲಿನ್ ಅವರ ತಲೆಗೆ 10 ಕೋಟಿ ರೂಪಾಯಿಗಳ ಬಹುಮಾನವನ್ನು ಪರಮಹಂಸ ಆಚಾರ್ಯ ಘೋಷಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಮಹಂಸರು ಈ ಹಿಂದೆ ವಿವಾದಗಳನ್ನು ಹುಟ್ಟುಹಾಕುವುದರಲ್ಲಿ ಹೆಸರುವಾಸಿಯಾಗಿದ್ದಾರೆ. ಈ ಹಿಂದೆ, ರಾಮಚರಿತಮಾನಸ್ ವಿರುದ್ಧದ ಹೇಳಿಕೆಗಾಗಿ ಬಿಹಾರದ ಸಚಿವರ ನಾಲಿಗೆಯನ್ನು ಕತ್ತರಿಸಿದ್ದಕ್ಕಾಗಿ ಅವರು 10 ಕೋಟಿ ರೂಪಾಯಿ ಬಹುಮಾನವನ್ನು ಘೋಷಿಸಿದ್ದರು.

ಈ ಹಿಂದೆ ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ವಿರುದ್ಧವೂ ಬೆದರಿಕೆ ಹಾಕಿದ್ದರು.

ಸನಾತನ ಧರ್ಮ ಸೊಳ್ಳೆಗಳಿದ್ದಂತೆ, ಡೆಂಗ್ಯೂ ಮತ್ತು ಮಲೇರಿಯಾವನ್ನು ನಿರ್ಮೂಲನೆ ಮಾಡಿದಂತೆ ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಶನಿವಾರ ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿ ದೇಶಾದ್ಯಂತ ಕೋಲಾಹಲ ಎಬ್ಬಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular