HomeKarnatakaರಾಜ್ಯದ ಜನತೆಗೆ ಗುಡ್ ನ್ಯೂಸ್: ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಮರಳು ನೀತಿ ಜಾರಿ, ಪ್ರತಿ...

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಮರಳು ನೀತಿ ಜಾರಿ, ಪ್ರತಿ ಟನ್ ಗೆ 300 ರೂ.

ಬೆಂಗಳೂರು: ರಾಜ್ಯದಲ್ಲಿ ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಸಮಗ್ರ ಮರಳು ನೀತಿ ಅನುಷ್ಠಾನಗೊಳಿಸಲಾಗಿದ್ದು, ಜಿಲ್ಲಾ ಮರಳು ಸಮಿತಿ ಮತ್ತು ಗ್ರಾಮ ಪಂಚಾಯಿತಿಗಳಿಂದ ಮರಳು ಬ್ಲಾಕ್ ಗಳ ವಿಲೇವಾರಿ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರದಲ್ಲಿ ಮರಳು ಸಿಗಲಿ ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಮರಳು ನೀತಿ ಜಾರಿಗೊಳಿಸಿದೆ. ಆಯವ್ಯಯದಲ್ಲಿ ಘೋಷಿಸಿದಂತೆ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸಿದೆ.

ಸಾರ್ವಜನಿಕರು ಹಾಗೂ ಸ್ಥಳೀಯ ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಕಡಿಮೆ ದರದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮರಳು ಪೂರೈಸಲು 1, 2 ಮತ್ತು 3ನೇ ಶ್ರೇಣಿಯ ಹಳ್ಳ ಪಾತ್ರಗಳಲ್ಲಿ ಲಭ್ಯವಿರುವ ಮರಳನ್ನು ತೆಗೆದು ವಿಲೇವಾರಿ ಮಾಡುವ ಜವಾಬ್ದಾರಿಯನ್ನು ಗ್ರಾಪಂಗಳಿಗೆ ವಹಿಸಲಾಗುವುದು. ಪ್ರತಿ ಮೆಟ್ರಿಕ್ ಟನ್ ಮರಳಿನ ಮಾರಾಟ ಬೆಲೆಯನ್ನು 300 ರೂ. ನಿಗದಿಪಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

4, 5 ಶ್ರೇಣಿಗಳ ಹಳ್ಳ, ನದಿ ಪಾತ್ರಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್ ಗಳನ್ನು ಸರ್ಕಾರದಿಂದ ಅಧಿಸೂಚಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಸರ್ಕಾರಿ ಇಲಾಖೆಗಳಿಗೆ ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. ಇದೇ ರೀತಿ ಸಾರ್ವಜನಿಕ, ಖಾಸಗಿ ಸಂಸ್ಥೆಗಳಿಗೆ ಟೆಂಡರ್ ಮೂಲಕ ಮರಳು ಬ್ಲಾಕ್ ವಿಲೇವಾರಿ ಮಾಡುವ ನಿಯಮದಲ್ಲಿ ತಿದ್ದುಪಡಿ ಮಾಡಲಾಗಿದೆ. ನೂತನ ನೀತಿಯಂತೆ ಮರಳು ಬ್ಲಾಕ್ ಗಳ ಟೆಂಡರ್ ಅನ್ನು ಆಯಾ ಜಿಲ್ಲಾ ಮರಳು ಸಮಿತಿಯಿಂದ ನಡೆಸಲಾಗುವುದು. ಜಿಲ್ಲಾವಾರು ಗುರುತಿಸಿದ ಮರಳು ಬ್ಲಾಕ್ ಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಮತ್ತು ಇತರೆ ಸಾಮಾನ್ಯ ವರ್ಗದವರಿಗೆ ರೋಸ್ಟರ್ ಪದ್ಧತಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ರಾಜ್ಯಾದ್ಯಂತ ಪ್ರತಿ ಮೆಟ್ರಿಕ್ ಟನ್ ಮರಳು ಏಕರೂಪ ಮಾರಾಟ ದರ 850 ರೂ. ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular