ಬೆಂಗಳೂರು : ಸ್ಯಾಂಡಲ್ ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಉಂಟಾಗುದ್ದು, ವಿಚ್ಚೇದನ ಕೋರಿ ಪತ್ನಿ ಸ್ವಪ್ನಾ ರಾವ್ ಕೋರ್ಟ್ ಮೊರೆ ಹೋಗಿದ್ದಾರೆ.
ಹೌದು, ಸ್ಯಾಂಡಲ್ ವುಡ್ ನ ಖ್ಯಾತ ನಟ ಅಜಯ್ ರಾವ್ ಹಾಗೂ ಸ್ವಪ್ನಾ ರಾವ್ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇದ್ದಕ್ಕಿದ್ದಂತೆ ಅವರ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಡೈವೋರ್ಸ್ ನೀಡುವಂತೆ ಸ್ವಪ್ನಾ ರಾವ್ ಕೋರ್ಟ್ ಮೊರೆ ಹೋಗಿದ್ದಾರೆ.
2014 ರಲ್ಲಿ ಸ್ವಪ್ನಾ ಜೊತೆ ದೇವಸ್ಥಾನದಲ್ಲಿ ಸರಳವಾಗಿ ವಿವಾಹವಾಗಿದ್ದ ಅಜಯ್ ರಾವ್ ಜೀವನ ಬಹಳ ಚೆನ್ನಾಗಿತ್ತು. ಪತಿ ಅಜಯ್ ರಾವ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದರೆ, ಸ್ವಪ್ನಾ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದರು. 2014 ರಲ್ಲಿ ಸರಳವಾಗಿದ್ದ ಈ ಜೋಡಿಗೆ ಮುದ್ದಾಗ ಮಗಳಿದ್ದಾಳೆ. ಮದುವೆ ಆಗಿ 11 ವರ್ಷಗಳ ಬಳಿಕ ಇಬ್ಬರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ. ಪತಿ ಅಜಯ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಕೇಸ್ ದಾಖಲಿಸಿರುವ ಪತ್ನಿ ಸ್ವಪ್ನಾ ವಿಚ್ಚೇದನ ಕೊಡಿಸುವಂತೆ ಕೋರ್ಟ್ ಮೊರೆ ಹೋಗಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ನಟ ಅಜಯ್ ರಾವ್ ಸಿಕ್ಕಾಪಟ್ಟೆ ಲಾಸ್ ಆಗಿದ್ದರು ಎಂಬ ಸುದ್ದಿ ಕೂಡ ಹರಿದಾಡಿತ್ತು. ಆದರೆ ಇದೀಗ ಜೀವನದಲ್ಲಿ ದೊಡ್ಡ ಬಿರುಗಾಳಿ ಎದ್ದಿದೆ. ನಟ ಅಜಯ್ ರಾವ್ ‘ಕೃಷ್ಣನ್ ಮ್ಯಾರೇಜ್ ಲವ್ ಸ್ಟೋರಿ’, ‘ತಾಜ್ ಮಹಲ್’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.