ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ನಿಧನ ; ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಕನ್ನಡದ ಹಿರಿಯ ನಟರಾದ ಶ್ರೀ ದ್ವಾರಕೀಶ್ ಅವರ ಅಗಲಿಕೆ ನನಗೆ ಬಹಳ ನೋವುಂಟು ಮಾಡಿದೆ. ಕಲಾವಿದರಾಗಿ ಅಷ್ಟೇ ಅಲ್ಲದೆ; ನಿರ್ಮಾಪಕರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಅನುಪಮ ಸೇವೆ ಆವಿಸ್ಮರಣೀಯ. ವರನಟ ಡಾ||ರಾಜ್ಕುಮಾರ್, ಡಾ||ವಿಷ್ಣುವರ್ಧನ್, ಶ್ರೀ ಅಂಬರೀಶ್ರಂಥ ದಿಗ್ಗಜರ ಜತೆ ನಟಿಸಿದ್ದ ಅವರು, ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಿನಿಮಾ ಅಸ್ತಿಯಾಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

https://twitter.com/hd_kumaraswamy/status/1780124254899707961

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read