HomeKarnatakaBIG NEWS: ನಟ ನಾಗಭೂಷಣ್ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

BIG NEWS: ನಟ ನಾಗಭೂಷಣ್ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ಸ್ಯಾಂಡಲ್ ವುಡ್ ನಟ ನಾಗಭೂಷಣ್ ಕಾರು ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ನಡೆದಿದೆ.

ಪ್ರೇಮ ಮೃತ ಮಹಿಳೆ. ತಡರಾತ್ರಿ ಕನಕಪುರ ರಸ್ತೆಯಲ್ಲಿ ವಸಂತಪುರ ರಸ್ತೆಯ ಅಪಾರ್ಟ್ ಮೆಂಟ್ ಬಳಿ ಈ ಅಪಘಾತ ಸಂಭವಿಸಿದೆ. ರಾತ್ರಿ ಊಟ ಮುಗಿಸಿ ದಂಪತಿ ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಕೆಯ ಪತಿ ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ನಾಗಭೂಷಣ್ ಅವರನ್ನು ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular