HomeEntertainmentನಟ ನಾಗಭೂಷಣ್ ವಿರುದ್ಧ FIR ದಾಖಲು; ಸ್ಯಾಂಡಲ್ ವುಡ್ ನಟ ಪೊಲೀಸ್ ವಶಕ್ಕೆ

ನಟ ನಾಗಭೂಷಣ್ ವಿರುದ್ಧ FIR ದಾಖಲು; ಸ್ಯಾಂಡಲ್ ವುಡ್ ನಟ ಪೊಲೀಸ್ ವಶಕ್ಕೆ

ಬೆಂಗಳೂರು: ಕಾರು ಅಪಘಾತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ನಾಗಭೂಷಣ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ತಡರಾತ್ರಿ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಕೋಣನಕುಂಟೆ ಅಪಾರ್ಟ್ ಮೆಂಟ್ ಬಳಿ ನಟ ನಾಗಭೂಷಣ್ ಅವರ ಕಾರು ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದ ದಂಪತಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಮಹಿಳೆ ಪ್ರೇಮಾ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಆಕೆಯ ಪತಿ ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ನಟ ನಾಗಭೂಷಣ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ನಟ ನಾಗಭೂಷಣ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular