HomeKarnatakaBREAKING : ಕಾವೇರಿ ವಿವಾದ : ಬೆಂಬಲ ನೀಡದ 'ಸ್ಯಾಂಡಲ್ ವುಡ್' ನಟರ ವಿರುದ್ಧ ಭುಗಿಲೆದ್ದ...

BREAKING : ಕಾವೇರಿ ವಿವಾದ : ಬೆಂಬಲ ನೀಡದ ‘ಸ್ಯಾಂಡಲ್ ವುಡ್’ ನಟರ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ

ಬೆಂಗಳೂರು : ಕಾವೇರಿ ಹೋರಾಟಕ್ಕೆ ಬೆಂಬಲ ನೀಡದ ಸ್ಯಾಂಡಲ್ ವುಡ್ ನಟರ ವಿರುದ್ಧ ಅನ್ನದಾತರ ಆಕ್ರೋಶ ಭುಗಿಲೆದ್ದಿದೆ.

ಹೌದು, ಕಾವೇರಿ ನೀರಿಗಾಗಿ ಕಳೆದ ಕೆಲವು ದಿನಗಳಿಂದ ಮಂಡ್ಯ ರೈತರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಸ್ಯಾಂಡಲ್ ವುಡ್ ನಟರು ಮಾತ್ರ ಕಾವೇರಿ ಹೋರಾಟದ ಬಗ್ಗೆ ಯಾವುದೇ ಧ್ವನಿ ಎತ್ತುತ್ತಿಲ್ಲ, ಬರೀ ಸಿನಿಮಾದಲ್ಲಿ ಡೈಲಾಗ್ ಹೊಡೆದು ರೈತರ ಪರ ಮಾತನಾಡುತ್ತಾರೆ. ಆದರೆ ರಿಯಲ್ ಲೈಫ್ ನಲ್ಲಿ ಯಾರೂ ಕೂಡ ರೈತರ ಪರ ಇಲ್ಲ ಎಂದು ರೈತರು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ನಟರ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಧಿಕ್ಕಾರದ ಪೋಸ್ಟ್ ಹಾಕಿ ತೀವ್ರವಾಗಿ ಆಕ್ರೋಶ ಹೊರ ಹಾಕಿದ್ದಾರೆ.

ಪ್ರಮುಖ ನಟರ ಫೋಟೋ ಹಾಕಿ, ನಟರ ಬಾಯಿಗೆ ಪಟ್ಟಿ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾವೇರಿ ವಿಚಾರವಾಗಿ ಸ್ಯಾಂಡಲ್ ವುಡ್ ನಟರು ಮೌನಕ್ಕೆ ಜಾರಿದ್ದಕ್ಕೆ ತೀವ್ರವಾಗಿ ಖಂಡಿಸಿದ್ದಾರೆ.ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಮೊನ್ನೆ ನಡೆದ ಸಭೆಯಲ್ಲಿ ಕರ್ನಾಟಕಕ್ಕೆ ಆದೇಶ ಹೊರಡಿಸಿತ್ತು ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಲು ಕರ್ನಾಟಕ ಸರ್ಕಾರಕ್ಕೆ CWMA ಆದೇಶ ನೀಡಿದೆ. ಈ ಹಿನ್ನೆಲೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular