ಬೆಂಗಳೂರು : ಸ್ಯಾಂಡಲ್ ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಉದ್ಯಮಿ ಹಾಗೂ ನಿರ್ಮಾಪಕ ಅರವಿಂದ್ ವೆಂಕಟೇಶ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಎವಿ ಆರ್ ಗ್ರೂಪ್ ಸಂಸ್ಥಾಪಕ ವೆಂಕಟೇಶ್ ರೆಡ್ಡಿ ಎಂದು ಗುರುತಿಸಲಾಗಿದೆ.
ಎಸಿಪಿ ಚಂದನ್ ಮತ್ತು ತಂಡ ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಬಂಧಿಸಿದೆ. ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದ ನಟಿಗೆ ಈತ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
2022 ರಲ್ಲಿ ಶ್ರೀಲಂಕಾದಲ್ಲಿ ನಡೆದ ಲಾರ್ಸ್ ಕ್ರಿಕೆಟ್ ಕಪ್ ಉದ್ಘಾಟನೆಗೆ ಬರುವಂತೆ ಅರವಿಂದ್ ನಟಿಗೆ ಹೇಳಿದ್ದ. ಅಂತೆಯೇ ಇಬ್ಬರು ಅಲ್ಲಿಗೆ ತೆರಳಿದ್ದರು. ಅಲ್ಲಿಂದ ಇಬ್ಬರ ಜೊತೆ ಪರಿಚಯ, ಸಲುಗೆ ಬೆಳೆಯಿತು. ಅಲ್ಲದೇ ನಟಿ ಜೊತೆ ದೈಹಿಕ ಸಂಪರ್ಕ ಬೆಳೆಸಿದ ಅರವಿಂದ್ ಆಕೆಗೆ ಕಿರುಕುಳ ನೀಡಲು ಶುರು ಮಾಡಲು ಆರಂಭಿಸಿದನು. ಇದರಿಂದ ಭಯಗೊಂಡ ನಟಿ ಆತ್ಮಹತ್ಯೆಗೆ ಕೂಡ ಯತ್ನಿಸಿದ್ದರು. ಈತ ನಟ ನಟಿಯರಿಗಾಗಿ ಹಲವು ಕ್ರಿಕೆಟ್ ಪಂದ್ಯಾವಳಿಯನ್ನ ಕೂಡ ಆಯೋಜಿಸಿದ್ದನು. ಸದ್ಯ ಸಂತ್ರಸ್ತ ನಟಿ ನೀಡಿದ ದೂರಿನ ಮೇರೆಗೆ ವೆಂಕಟೇಶ್ ರೆಡ್ಡಿಯನ್ನು ಬಂಧಿಸಲಾಗಿದೆ.ಶ್ರೀಲಂಕಾದಿಂದ ಬೆಂಗಳೂರಿಗೆ ಬರುವಾಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿನಿಮಾ ನಿರ್ಮಾಪಕ, ಉದ್ಯಮಿ ಆಗಿರುವ ವೆಂಕಟೇಶ್ ರೆಡ್ಡಿ ಸ್ಯಾಂಡಲ್ ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದನು. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
