HomeKarnatakaBREAKING : ಬೆಂಗಳೂರಿನ ಅಪಾರ್ಟ್ ಮೆಂಟ್'ನಲ್ಲಿ ಸ್ಯಾಂಡಲ್‌ವುಡ್ ನಟಿ 'ಕೃಷಿ ತಾಪಂಡ' ಗೆಳೆಯ ಆತ್ಮಹತ್ಯೆ.!

BREAKING : ಬೆಂಗಳೂರಿನ ಅಪಾರ್ಟ್ ಮೆಂಟ್’ನಲ್ಲಿ ಸ್ಯಾಂಡಲ್‌ವುಡ್ ನಟಿ ‘ಕೃಷಿ ತಾಪಂಡ’ ಗೆಳೆಯ ಆತ್ಮಹತ್ಯೆ.!

ಬೆಂಗಳೂರು : ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡ ಅವರ ರಾಜರಾಜೇಶ್ವರಿ ನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಅವರ ಆತ್ಮೀಯ ಗೆಳೆಯ ವೈಶಾಕ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ನಗರದಲ್ಲಿ ಸಂಚಲನ ಮೂಡಿಸಿದೆ.

ಮೃತನನ್ನು ವೈಶಾಕ್ ಎಂದು ಗುರುತಿಸಲಾಗಿದ್ದು, ಆತ ನಟಿ ಕೃಷಿ ತಾಪಂಡ ಅವರ ದೀರ್ಘಕಾಲದ ಆತ್ಮೀಯ ಸ್ನೇಹಿತನಾಗಿದ್ದ ಎಂದು ತಿಳಿದುಬಂದಿದೆ. ಮಾಹಿತಿ ಪ್ರಕಾರ, ಘಟನೆ ನಡೆದ ವೇಳೆ ಮನೆಯಲ್ಲಿ ಯಾರೂ ಇಲ್ಲದಿದ್ದ ಸಮಯದಲ್ಲಿ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆ ಕುರಿತು ತಿಳಿದುಬಂದಂತೆ, ವೈಶಾಕ್ ನಿನ್ನೆ ರಾತ್ರಿ ಸುಮಾರು 8:30ರ ವೇಳೆಗೆ ಕೃಷಿ ತಾಪಂಡ ಅವರಿಗೆ ಕರೆ ಮಾಡಿ “ನಾನು ಸಾಯುತ್ತೇನೆ” ಎಂದು ಹೇಳಿದ್ದಾರೆ ಎನ್ನಲಾಗಿದೆ. ಬಳಿಕ ಕೆಲವೇ ಗಂಟೆಗಳೊಳಗೆ ಆತ ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ಬೆಳಕಿಗೆ ಬಂದ ತಕ್ಷಣ ಸ್ಥಳಕ್ಕೆ ರಾಜರಾಜೇಶ್ವರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳು ಮತ್ತು ಮೊಬೈಲ್ ಕರೆ ವಿವರಗಳನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಕೆಲವು ದಿನಗಳ ಹಿಂದೆ ವೈಶಾಕ್ ಡಿಪ್ರೆಷನ್ ಗೆ ಕೂಡ ಹೋಗಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ. ಯಾವುದೋ ಒಂದು ಆರೋಪಕ್ಕೆ ವೈಶಾಕ್ ಬಹಳ ನೊಂದಿದ್ದರು ಎನ್ನಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ವೈಯಕ್ತಿಕ ಸಮಸ್ಯೆಗಳೇ ಕಾರಣವೋ ಅಥವಾ ಇತರ ಕಾರಣಗಳಿವೆಯೋ ಎಂಬ ಬಗ್ಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.ಈ ಘಟನೆ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ನಿರೀಕ್ಷಿಸಲಾಗಿದೆ. ಪ್ರಕರಣದ ಸಂಪೂರ್ಣ ಸತ್ಯಾಂಶ ತಿಳಿಯಲು ತನಿಖೆ ಮುಂದುವರಿದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular