BREAKING NEWS: ‘ಮಠ’ ಸಿನಿಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಟ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದುಕೊಂಡು ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಗುರು ಪ್ರಸಾದ್ ನಿರ್ದೇಶಿಸಿದ್ದ, ನವರಸನಾಯಕ ಜಗ್ಗೇಶ್ ಅಭಿನಯದ ಮಠ ಸಿನಿಮಾ ಭಾರಿ ಜನಪ್ರಿಯತೆ ಪಡೆದುಕೊಂಡಿತ್ತು.

ಹಲವಾರು ಸಿನಿಮಾಗಳಲ್ಲಿ ನಟನಾಗಿ, ನಿರ್ದೇಶಕನಾಗಿ ಕಾರ್ಯನಿರ್ವಹಿಸಿದ್ದ ಗುರುಪ್ರಸಾದ್, ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗುರುಪ್ರಸಾದ್ ಇತ್ತೀಚೆಗೆ ಎರಡನೇ ವಿವಾಹವಾಗಿದ್ದರು. ವಿವಾಹದ ಬಳಿಕ ಮಾದನಾಯಕನಹಳ್ಳಿ ಬಳಿ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಗುರುಪ್ರಸಾದ್ ಮಠ, ಎದ್ದೇಳು ಮಂಜುನಾಥ್, ಡೈರೆಕ್ಟರ್ ಸ್ಪೆಷಲ್, ರಂಗನಾಯಕ, ಎರಡನೇ ಸಲ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದರು. ಅವರ ನಿರ್ದೇಶನದ ಅಡೆಮಾ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಈ ಮಧ್ಯೆಯೇ ಗುರುಪ್ರಸಾದ್ ನೇಣಿಗೆ ಶರಣಾಗಿದ್ದು, ಕನ್ನಡ ಚಿತ್ರರಂಗಕ್ಕೆ ಆಘಾತ ಎದುರಾಗಿದೆ.

ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read