HomeKarnatakaರೈತರಿಗೆ ಆಕರ್ಷಕ ಆದಾಯ: 'ಶ್ರೀಗಂಧದ ನಾಡು’ ಗತವೈಭವ ಮರುಸ್ಥಾಪನೆಗೆ ಸರ್ಕಾರ ಸಿದ್ಧತೆ

ರೈತರಿಗೆ ಆಕರ್ಷಕ ಆದಾಯ: ‘ಶ್ರೀಗಂಧದ ನಾಡು’ ಗತವೈಭವ ಮರುಸ್ಥಾಪನೆಗೆ ಸರ್ಕಾರ ಸಿದ್ಧತೆ

ಬೆಂಗಳೂರು: ಮುಂದಿನ 5 ವರ್ಷದ ಅವಧಿಯಲ್ಲಿ ರಾಜ್ಯದ 10ರಿಂದ 15 ಸಾವಿರ ಎಕರೆ ಪ್ರದೇಶದಲ್ಲಿ ಗಂಧದ ಮರ ಬೆಳೆಸುವ ಮೂಲಕ ಶ್ರೀಗಂಧದ ನಾಡು ಎಂಬ ಗತವೈಭವ ಮರುಸ್ಥಾಪನೆಗೆ ರಾಜ್ಯ ಸರ್ಕಾರ ಸಿದ್ಧತೆ ಕೈಗೊಂಡಿದೆ.

ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ರಾಜ್ಯವನ್ನು ಮರಳಿ ‘ಗಂಧದ ಗುಡಿ’ಯಾಗಿಸುವ ನಿಟ್ಟಿನಲ್ಲಿ ಕೆಎಸ್‌ಡಿಎಲ್ ನಿಂದ ಯೋಜನೆ ರೂಪಿಸಲಾಗಿದೆ. ಪ್ರತಿ ವರ್ಷ 1,000 ಎಕರೆ ಪ್ರದೇಶದಲ್ಲಿ ರೈತರು, ಖಾಸಗಿ ಸಹಭಾಗಿತ್ವದಲ್ಲಿ ಶ್ರೀಗಂಧ ಬೆಳೆಯಲು ಯೋಜನೆ ರೂಪಿಸಲಾಗಿದೆ. ಮುಂದಿನ ಐದು ವರ್ಷದಲ್ಲಿ 15 ಸಾವಿರ ಎಕರೆ ಪ್ರದೇಶದಲ್ಲಿ ಶ್ರೀಗಂಧ ಬೆಳೆಯುವ ಗುರಿ ಹೊಂದಿದ್ದು, ಇದರಿಂದ ರೈತರಿಗೆ ಆಕರ್ಷಕ ಆದಾಯ ಲಭಿಸಲಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular