HomeLatest NewsBREAKING : ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಭಾಮಾ ಹರೀಶ್ ಪುತ್ರ ಉಲ್ಲಾಸ್ ಗೌಡ ಹೃದಯಾ‍ಘಾತದಿಂದ...

BREAKING : ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಭಾಮಾ ಹರೀಶ್ ಪುತ್ರ ಉಲ್ಲಾಸ್ ಗೌಡ ಹೃದಯಾ‍ಘಾತದಿಂದ ನಿಧನ.!

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಬಾ.ಮಾ. ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ ಅವರು ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗದಲ್ಲಿ ಆಘಾತಕ್ಕೆ ಕಾರಣವಾಗಿದೆ. ಕಾರಣವಾಗಿದೆ.

ಉಲ್ಲಾಸ್ ಗೌಡ ಅವರು ಶಿವಮೊಗ್ಗದ ಕೊಡಚಾದ್ರಿಗೆ ಟ್ರೆಕ್ಕಿಂಗ್ ಹೋಗಿದ್ದಾಗ  ಹೃದಯಾಘಾತ ಕಾಣಿಸಿಕೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ, ಉಲ್ಲಾಸ್ ಗೌಡ ಅವರಿಗೆ ಏಕಾಏಕಿ ಹೃದಯಾಘಾತ ಉಂಟಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಉಲ್ಲಾಸ್ ಗೌಡ ಅವರಿಗೆ ಕೆಲವು ತಿಂಗಳ ಹಿಂದೆ ನಿಶ್ಚಿತಾರ್ಥ ಆಗಿತ್ತು, ಮುಂದಿನ ಡಿಸೆಂಬರ್ ನಲ್ಲಿ  ಮದುವೆ ಕೂಡ ನಿಶ್ಚಯವಾಗಿತ್ತು. ಆದರೆ ವಿಧಿ ಲಿಖಿತವೇ ಬೇರೆ ಆಗಿತ್ತು .

ನಿರ್ಮಾಪಕ ಬಾ.ಮಾ. ಹರೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳನ್ನು ನಿರ್ಮಿಸಿ ಗುರುತಿಸಿಕೊಂಡಿದ್ದು, ಮೆಜೆಸ್ಟಿಕ್, ಮಿ.ಬಕ್ರಾ, ಮಾಗಡಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಿರ್ಮಿಸಿದ್ದರು.  ಉಲ್ಲಾಸ್ ಗೌಡ ಅವರ ಅಂತ್ಯಕ್ರಿಯೆ ಕುಟುಂಬದವರ ಸಮ್ಮುಖದಲ್ಲಿ ನೆರವೇರಲಿದ್ದು, ಅಂತಿಮ ದರ್ಶನದ ವಿವರಗಳನ್ನು ಕುಟುಂಬವು ಬಳಿಕ ತಿಳಿಸಲಿದೆ. ಚಿತ್ರರಂಗದ ಹಲವರು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular