HomeEntertainmentಡಾ. ರಾಜ್, ವಿಷ್ಣು ಜೊತೆ ನಟಿಸಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಟಿ. ತಿಮ್ಮಯ್ಯ ಇನ್ನಿಲ್ಲ

ಡಾ. ರಾಜ್, ವಿಷ್ಣು ಜೊತೆ ನಟಿಸಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಟಿ. ತಿಮ್ಮಯ್ಯ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಟಿ. ತಿಮ್ಮಯ್ಯ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಾಲ್ವರು ಮಕ್ಕಳನ್ನು ಹಿರಿಯ ನಟರಾದ ಟಿ. ತಿಮ್ಮಯ್ಯ ಅಗಲಿದ್ದಾರೆ.

ಡಾ. ರಾಜಕುಮಾರ್, ಡಾ. ವಿಷ್ಣುವರ್ಧನ್ ಸೇರಿದಂತೆ ಹಲವು ಹಿರಿಯ ನಟರೊಂದಿಗೆ ಟಿ. ತಿಮ್ಮಯ್ಯ ಅಭಿನಯಿಸಿದ್ದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಖ್ಯಾತ ನಿರ್ದೇಶಕರಾದ ದೊರೆ ಭಗವಾನ್, ಸುನಿಲ್ ಕುಮಾರ್ ದೇಸಾಯಿ, ಭಾರ್ಗವ, ಕೆ.ವಿ. ಜಯರಾಮ್ ಸೇರಿದಂತೆ ಅನೇಕರೊಂದಿಗೆ ಅವರು ಕೆಲಸ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಚಲಿಸುವ ಮೋಡಗಳು’, ‘ಪ್ರತಿ ಧ್ವನಿ’, ‘ಬಂಧನ’, ‘ಬೆಂಕಿಯ ಬಲೆ’, ಸೇರಿದಂತೆ ಹಲವು ಸಿನಿಮಾಗಳಲ್ಲಿ ಹಿರಿಯ ನಟರಾದ ತಿಮ್ಮಯ್ಯ ಅಭಿನಯಿಸಿದ್ದರು. ನಾಳೆ ಮಧ್ಯಾಹ್ನ 12 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular