HomeLatest NewsBIG NEWS: ಸಂಕಷ್ಟದಲ್ಲಿರುವ ಕನ್ನಡ ಚಿತ್ರರಂಗ ಉಳಿಸಲು ಮುಂದಾದ ನಟರು: ಶಿವರಾಜ್ ಕುಮಾರ್ ನಿವಾಸದಲ್ಲಿ ಮಹತ್ವದ...

BIG NEWS: ಸಂಕಷ್ಟದಲ್ಲಿರುವ ಕನ್ನಡ ಚಿತ್ರರಂಗ ಉಳಿಸಲು ಮುಂದಾದ ನಟರು: ಶಿವರಾಜ್ ಕುಮಾರ್ ನಿವಾಸದಲ್ಲಿ ಮಹತ್ವದ ಸಭೆ

ಬೆಂಗಳೂರು: ಕನ್ನಡ ಚಿತ್ರರಂಗದ ವಿವಿಧ ಸಮಸ್ಯೆ ಹಾಗೂ ಸವಾಲುಗಳ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ನಟ ಶಿವರಾಜ್ ಕುಮಾರ್ ನಿವಾಸದಲ್ಲಿ ಮಹತ್ವದ ಸಭೆ ನಡೆದಿದೆ.

ಶಿವರಾಜ್ ಕುಮಾರ್ ಅವರ ಬೆಂಗಳೂರಿನ ನಾಗವಾರದಲ್ಲಿರುವ ನಿವಾಸದಲ್ಲಿ ಶಿವರಾಜ್ ಕುಮಾರ್ ನೇತೃತ್ವದಲ್ಲಿ ನಡೆದಿರುವ ಉನ್ನತ ಮಟ್ಟದ ಸಭೆಯಲ್ಲಿ ಚಿತ್ರರಂಗದ ಎಲ್ಲಾ ನಟರು, ನಿರ್ಮಾಪಕರು, ನಿರ್ದೇಶಕರು, ಪ್ರದರ್ಶಕರು, ವಿತರಕರು ಸೇರಿದಂತೆ ಹಲವರು ಭಾಗಿಯಾಗಿದ್ದರೆ. ನಟರಾದ ದುನಿಯಾ ವಿಜಯ್, ಗಣೇಶ್, ದ್ರುವ ಸರ್ಜಾ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ಕನ್ನಡ ಸಿನಿಮಾಗಳು, ಟಿಕೆಟ್ ದರ ವಿಚಾರ, ಚಿತ್ರಮಂದಿರದಲ್ಲಿ ಪ್ರೇಕ್ಷಕರ ಸಂಖ್ಯೆ ಕುಸಿತ, ಕನ್ನಡ ಸಿನಿಮಾಗಳ ಸಂಕಷ್ಟ-ಸವಾಲುಗಳು ಒಟ್ಟಾರೆ ಕನ್ನಡ ಚಿತ್ರರಂಗ ಉಳಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ನಟ ಶಿವರಾಜ್ ಕುಮರ್ ನೇತೃತ್ವದಲ್ಲಿ ಶೀಘ್ರದಲ್ಲಿಯೇ ಚಿತ್ರರಂಗದ ಹಿರಿಯರ ತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular