HomeLatest NewsBIG NEWS: ಈರುಳ್ಳಿ ಮೂಟೆಗಳಲ್ಲಿ ಶ್ರೀಗಂಧದ ತುಂಡುಗಳನ್ನಿಟ್ಟು ಸಾಗಾಟ: ಬೆಂಗಳೂರು ಮೂಲಕ ಚೀನಾಗೆ ಸಪ್ಲೈ ಮಾಡುತ್ತಿದ್ದ...

BIG NEWS: ಈರುಳ್ಳಿ ಮೂಟೆಗಳಲ್ಲಿ ಶ್ರೀಗಂಧದ ತುಂಡುಗಳನ್ನಿಟ್ಟು ಸಾಗಾಟ: ಬೆಂಗಳೂರು ಮೂಲಕ ಚೀನಾಗೆ ಸಪ್ಲೈ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಈರುಳ್ಳಿ ಮೂಟಗಳಲ್ಲಿ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಶೇಖ್ ಶಾರೂಕ್, ಶೇಖ್ ಅಬ್ದುಲ್, ಪರಮೇಶ್, ರಾಮ್ ಭೂಪಾಲ್ ಬಂಧಿತ ಆರೋಪಿಗಳು. ಬೆಂಗಳೂರಿನ ಸಿದ್ದಾಪುರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಶ್ರೀಗಂಧ ಕಳ್ಳಸಾಗಾಣೆ ಕಿಂಗ್ ಪಿನ್ ಸಿರಾಜ್ ಎಂಬಾತ ತಾನು ಈರುಳ್ಳಿ ಮಾರಾಟಗಾರರ ಎಂದು ವೇಷ ಹಾಕಿಕೊಂಡು ಆಂಧ್ರಪ್ರದೇಶದ ಕರ್ನೂಲ್ ನಿಂದ ಈಶ್ರೀಗಂದದ ತುಂಡುಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ. ಬೆಂಗಳೂರಿಗೆ ಬಂದ ಶ್ರೀಗಂಧದ ತುಂಡುಗಳನ್ನು ಚೀನಾಗೆ ಸಪ್ಲೈ ಮಾಡಲಾಗುತ್ತಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೀಗೆ ಈರುಳ್ಳಿ ಮೂಟೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಶ್ರೀಗಂಧದ ತುಂಡುಗಳ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ಈರುಳ್ಳಿ ಮೂಟೆಗಳ ಸಮೇತ 18 ಶ್ರೀಗಂಧದ ತುಂಡುಗಳನ್ನು ಜಪ್ತಿ ಮಾಡಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular