HomeEntertainmentನಾಳೆ 'ಉಪಾಧ್ಯಕ್ಷ' ಟೀಸರ್ ರಿಲೀಸ್ ಇವೆಂಟ್ ಕಾರ್ಯಕ್ರಮಕ್ಕೆ ಸ್ಯಾಂಡಲ್ವುಡ್ ಸ್ಟಾರ್‌ ಗಳ ಆಗಮನ

ನಾಳೆ ‘ಉಪಾಧ್ಯಕ್ಷ’ ಟೀಸರ್ ರಿಲೀಸ್ ಇವೆಂಟ್ ಕಾರ್ಯಕ್ರಮಕ್ಕೆ ಸ್ಯಾಂಡಲ್ವುಡ್ ಸ್ಟಾರ್‌ ಗಳ ಆಗಮನ

ಚಿಕ್ಕಣ್ಣನ ಉಪಾಧ್ಯಕ್ಷ ಎಲ್ಲಿಗೆ ಬಂತು? - chitraloka.com | Kannada Movie News, Reviews | Image

ನಾಳೆ ಚಿಕ್ಕಣ್ಣ ಅಭಿನಯದ ‘ಉಪಾಧ್ಯಕ್ಷ’ ಚಿತ್ರದ ಟೀಸರ್ ಬಿಡುಗಡೆಯಾಗಲಿದ್ದು, ಸ್ಯಾಂಡಲ್ವುಡ್ ನ ಹಲವಾರು ಸೆಲಬ್ರೆಟಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

ಮರಿ ಟೈಗರ್ ವಿನೋದ್ ಪ್ರಭಾಕರ್ ಸೇರಿದಂತೆ ನೆನಪಿರಲಿ ಪ್ರೇಮ್, ಧನ್ವೀರ್ ಗೌಡ, ಅದಿತಿ ಪ್ರಭುದೇವ, ಮೇಘನ ಗಾವಂಕರ್, ನಿರ್ದೇಶಕ ಪ್ರೇಮ್, ಸೋನಾಲ್ ಮಂಟೆರೋ, ಅಭಿಷೇಕ್ ಅಂಬರೀಶ್, ಕೆಜಿಎಫ್ ಖ್ಯಾತಿಯ ಗರುಡ ರಾಮ್ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನಿಲ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಚಿಕ್ಕಣ್ಣ ಮತ್ತು ‘ಹಿಟ್ಲರ್ ಕಲ್ಯಾಣ’ ಧಾರವಾಹಿಯ ಮಲೈಕಾ ವಾಸುಪಾಲ್ ಪ್ರಮುಖ ಪಾತ್ರದಲ್ಲಿದ್ದು, ಡಿ ಎನ್ ಸಿನಿಮಾ ಬ್ಯಾನರ್ ನಡಿ ಸ್ಮಿತಾ ಉಮಾಪತಿ ಮತ್ತು ನಿರ್ಮಲಾ ಶ್ರೀನಿವಾಸ್ ನಿರ್ಮಾಣ ಮಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular