HomeKarnatakaಅಕ್ರಮವಾಗಿ ಸಾಗಿಸುತ್ತಿದ್ದ 15 ಲಕ್ಷ ರೂ. ಮೌಲ್ಯದ ಶ್ರೀಗಂಧ ವಶ: ಇಬ್ಬರು ಅರೆಸ್ಟ್

ಅಕ್ರಮವಾಗಿ ಸಾಗಿಸುತ್ತಿದ್ದ 15 ಲಕ್ಷ ರೂ. ಮೌಲ್ಯದ ಶ್ರೀಗಂಧ ವಶ: ಇಬ್ಬರು ಅರೆಸ್ಟ್

ಬಳ್ಳಾರಿ: ಸಂಡೂರು ಉತ್ತರ ಮತ್ತು ದಕ್ಷಿಣ ವಲಯದ ಅರಣ್ಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದ ಇಬ್ಬರನ್ನು ಸೋಮವಾರ ಬಂಧಿಸಿದ್ದಾರೆ.

ಸುಶೀಲನಗರ ಗ್ರಾಮದ ಲೋಕೇಶ್ ನಾಯ್ಕ್ ಮತ್ತು ಕಿರಣ್ ಕುಮಾರ್ ಹೆಚ್.ಕೆ ಬಂಧಿತ ಆರೋಪಿಗಳು. ಒಟ್ಟು 110 ಕೆಜಿ ಶ್ರೀಗಂಧದ ತುಂಡುಗಳು ಮತ್ತು ಸಾಗಾಣಿಕೆಗೆ ಬಳಸಿದ್ದ ಮಹೇಂದ್ರ ಮೊರಾಜೊ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಆಂಧ್ರಪ್ರದೇಶದ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಯವರ ಸಹಕಾರದೊಂದಿಗೆ ಆಂಧ್ರಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ರೋಲ್ಲ ಗ್ರಾಮದಲ್ಲಿರುವ ಮೆ.ನಿಷತ್ ಫ್ರೆಗ್ರೆನ್ಸ್ ಫ್ಯಾಕ್ಟರಿ ಮೇಲೆ ದಾಳಿ ನಡೆಸಿ, ಅಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಸುಮಾರು 179 ಕೆಜಿ ಶ್ರೀಗಂಧವನ್ನು ಜಪ್ತಿ ಮಾಡಲಾಗಿದ್ದು, ಜಪ್ತಿ ಮಾಡಿದ ಸರಕನ್ನು ಪೆನುಕೊಂಡ ಎಫ್‌ಆರ್‌ಓ ವಶಕ್ಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್. ಬಸವರಾಜ್, ಎಸಿಎಫ್ ಶರಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ.

ಅರಣ್ಯ ಅಧಿಕಾರಿಗಳಾದ ಸಂಡೂರು ಉತ್ತರ ಆರ್‌ಎಫ್‌ಓ ಬಿ.ಎಸ್.ಮಂಜುನಾಥ್ ಮತ್ತು ಸಂಡೂರು ದಕ್ಷಿಣ ಆರ್‌ಎಫ್‌ಓ ಸೈಯದ್ ದಾದಾ ಖಲಂದರ್ ನೇತೃತ್ವ ವಹಿಸಿದ್ದರು.

ಡಿಆರ್‌ಎಫ್‌ಓ ಗಳಾದ ತಿಪ್ಪೇಸ್ವಾಮಿ, ಮಹೇಶ್, ಹೊನ್ನೂರಸ್ವಾಮಿ, ಶ್ರೀಧರ್ ಹಾಗೂ ಬೀಟ್ ಫಾರೆಸ್ಟರ್ ರಾಘವೇಂದ್ರ ಮತ್ತು ಸಿಬ್ಬಂದಿ ವರ್ಗ ತಂಡದಲ್ಲಿದ್ದರು.

ಮೂರು ದಿನಗಳ ಕಾರ್ಯಾಚರಣೆ ಮಾಡಿದ್ದು, ಪ್ರಕರಣದಲ್ಲಿ ಇದುವರೆಗೆ ಒಟ್ಟು 07 ಆರೋಪಿಗಳ ಮೇಲೆ ಕೇಸ್ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್. ಬಸವರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular